ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 1ಕ್ಕೆ ‘ವಿಂಡೋ ಸೀಟ್‌’ ತೆರೆಗೆ

ಚಿತ್ರದ ನಿರ್ದೇಶಕಿ ಶೀತಲ್ ಶೆಟ್ಟಿ ಮಾಹಿತಿ
Last Updated 23 ಜೂನ್ 2022, 4:03 IST
ಅಕ್ಷರ ಗಾತ್ರ

ಶಿವಮೊಗ್ಗ: ಕೌತುಕದ ಜತೆಗೆ ಪ್ರೇಮದ ಹಂದರವಿರುವ ‘ವಿಂಡೋ ಸೀಟ್’ ಚಲನಚಿತ್ರ ಜುಲೈ 1ರಂದು ರಾಜ್ಯದಾದ್ಯಂತ ತೆರೆಗೆ ಬರಲಿದೆ ಎಂದು ಚಿತ್ರದ ನಿರ್ದೇಶಕಿ ಶೀತಲ್ ಶೆಟ್ಟಿ ಹೇಳಿದರು.

‘ಕನ್ನಡ ಚಾನಲ್ ಒಂದರಲ್ಲಿ ನಿರೂಪಕಿಯಾಗಿದ್ದ ನಾನು ನಿರ್ದೇಶನದತ್ತ ಸಾಗಿದ್ದು, ಇದಕ್ಕೆ ಪೂರಕವಾಗಿ ಒಂದೆರಡು ಕಿರುಚಿತ್ರಗಳನ್ನು ನಿರ್ದೇಶಿಸಿದೆ. ಇದು ನನಗೆ ಸ್ಫೂರ್ತಿ ತಂದಿತು. ನಿರ್ದೇಶಕನಿಗಿರಬೇಕಾದ ಎಲ್ಲ ವಿಷಯಗಳತ್ತ ಗಮನ ಹರಿಸಿ ಕಲಿತು ಈ ಚಿತ್ರದ ನಿರ್ದೇಶನ ಮಾಡಿದ್ದೇನೆ. ಇದು ನನ್ನ ಪ್ರಥಮ ನಿರ್ದೇಶನದ ಚಿತ್ರ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಂಡೋಸೀಟ್ ಚಿತ್ರದಲ್ಲಿ ನಾಯಕನಟನಾಗಿ ರಂಗಿತರಂಗ ಖ್ಯಾತಿಯ ನಿರೂಪ್ ಭಂಡಾರಿ, ನಾಯಕಿಯರಾಗಿ ಅಮೃತ್ ಅಯ್ಯಂಗಾರ್ ಮತ್ತು ಸಂಜನಾ ಆನಂದ್, ಮುಖ್ಯ ಕಲಾವಿದರಾಗಿ ರವಿಶಂಕರ್, ಮಧುಸೂದನರಾವ್, ರೇಖಾ ನಾಯ್ಡು, ಕಾಮಿಡಿ ಕಿಲಾಡಿ ಸೂರಜ್ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಮಂಜುನಾಥಗೌಡ ಅವರ ನಿರ್ಮಾಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವಿಘ್ನೇಶ್ ರಾಜ್ ಛಾಯಾಗ್ರಹಣ, ಯೋಗರಾಜ್ ಭಟ್ ಹಾಗೂ ಕವಿರಾಜ್ ಗೀತ ರಚನೆ ಇದೆ ಎಂದು ವಿವರಿಸಿದರು.

‘ನಾನು ಶಿವಮೊಗ್ಗದವಳೇ. ಶಿವಮೊಗ್ಗ ಸಮೀಪದ ಆಯನೂರು ನಮ್ಮೂರು. ಹಾಗಾಗಿ ಈ ಜಿಲ್ಲೆಯ ಬಗ್ಗೆ ನನಗೆ ಸಾಕಷ್ಟು ಹೆಮ್ಮೆ ಇದೆ. ತಾಳಗುಪ್ಪ ಮತ್ತು ಸಾಗರ ಸುತ್ತ ಮುತ್ತ ಚಿತ್ರೀಕರಣ ಮಾಡಿದ್ದೇವೆ. ಮಲೆನಾಡಿನ ಹಸಿರಿನ ಸೊಬಗು ದೃಶ್ಯಗಳಲ್ಲಿ ಮೂಡಿ ಬಂದಿದೆ. ಶಿವಮೊಗ್ಗದ ಜನ ಇದನ್ನು ತುಂಬಾ ಇಷ್ಟ ಪಡುತ್ತಾರೆ ಎಂಬ ದೃಢ ವಿಶ್ವಾಸ ನನಗಿದೆ. ಪ್ರೇಕ್ಷಕರು ದಯವಿಟ್ಟು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಬೇಕು’ ಎಂದ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ನಾಯಕ ನಿರೂಪ್ ಭಂಡಾರಿ, ನಾಯಕಿ ಅಮೃತ್ ಅಯ್ಯಂಗಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT