ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕಾರಿಪುರ: ಸಾಕಿದ ಬೆಕ್ಕು ಕಚ್ಚಿ ಮಹಿಳೆ ಸಾವು

Published : 10 ಆಗಸ್ಟ್ 2024, 15:55 IST
Last Updated : 10 ಆಗಸ್ಟ್ 2024, 15:55 IST
ಫಾಲೋ ಮಾಡಿ
Comments

ಶಿಕಾರಿಪುರ: ಮನೆಯಲ್ಲಿ ಸಾಕಿದ ಬೆಕ್ಕು ಕಚ್ಚಿದ ಪರಿಣಾಮ ತಾಲ್ಲೂಕಿನ ತರಲಘಟ್ಟ ಕ್ಯಾಂಪಿನ ಮಹಿಳೆಯೊಬ್ಬರು (50) ಮೃತಪಟ್ಟಿದ್ದಾರೆ.

ಮಹಿಳೆ ಕಾಲಿಗೆ 2 ತಿಂಗಳ ಹಿಂದೆ ಬೆಕ್ಕು ಕಚ್ಚಿತ್ತು. ಐದು ಇಂಜೆಂಕ್ಷನ್ ತೆಗೆದುಕೊಳ್ಳಬೇಕಿತ್ತು. ಆದರೆ, ಮಹಿಳೆ ಒಂದು ಇಂಜೆಕ್ಷನ್ ಪಡೆದು ಆರೋಗ್ಯದಲ್ಲಿ ಚೇತರಿಕೆಯಾದ ಕಾರಣ ಸುಮ್ಮನಾಗಿದ್ದರು. ನಂತರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದ ಕಾರಣ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾರೆ.

ಆಶಾ ಕಾರ್ಯಕರ್ತೆಯರು ಮಹಿಳೆಗೆ ಇಂಜೆಕ್ಷನ್ ಪಡೆಯುವಂತೆ ತಿಳಿಸಿದ್ದರು. ಆದರೆ, ಮಹಿಳೆ ನಿರ್ಲಕ್ಷ್ಯ ತೋರಿದ ಪರಿಣಾಮ ಈ ಸಾವು ಸಂಭವಿಸಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ನವೀದ್ ಖಾನ್ ಪ್ರಜಾವಾಣಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT