ಶುಕ್ರವಾರ, ಡಿಸೆಂಬರ್ 2, 2022
20 °C

ಶಿವಮೊಗ್ಗ: ಲಾರಿ ಹಾಯ್ದು ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಭದ್ರಾವತಿ ಬಳಿ ಕಡದಕಟ್ಟೆ ಸಿದ್ದಾಪುರದ ಬೈಪಾಸ್ ರಸ್ತೆಯ ಕಾಡುಮನೆಯ ಹೋಟೆಲ್ ಬಳಿ ಶನಿವಾರ ರಸ್ತೆ ಅಪಘಾತದಲ್ಲಿ ವಿವಾಹಿತ ಮಹಿಳೆ ಸಾವನ್ನಪ್ಪಿದ್ದಾರೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದೆ.

ಭದ್ರಾವತಿ ನಗರದ 26 ವರ್ಷದ ಜ್ಞಾನೇಶ್ವರಿ (ಪ್ರೀತಿ) ಮೃತಪಟ್ಟವರು. ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಸಂಬಂಧ ದಾಖಲಾಗಿದ್ದ ಪತಿಯನ್ನು ನೋಡಲು ಮೈದುನನ ಜೊತೆ ಬೈಕ್‌ನಲ್ಲಿ ಹೊರಟಿದ್ದರು. ಆಗ ಶಿವಮೊಗ್ಗ-ಭದ್ರಾವತಿ ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಕೆಳಗೆ ಬಿದ್ದ ಜ್ಞಾನೇಶ್ವರಿ ಮೇಲೆ ಹಿಂಬದಿಯಲ್ಲಿ ಬರುತ್ತಿದ್ದ ಲಾರಿ ಹರಿದಿದೆ. ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕ್ ಸವಾರ ಪ್ರೇಮಸಾಗರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಭದ್ರಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭದ್ರಾವತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.