ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀರ್ಥಹಳ್ಳಿ: ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿ ಶವ ಪತ್ತೆ

Published 3 ಏಪ್ರಿಲ್ 2024, 18:13 IST
Last Updated 3 ಏಪ್ರಿಲ್ 2024, 18:13 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಹಣಗರೆಕಟ್ಟೆಯ ಪ್ರಸಿದ್ಧ ಹಜರತ್ ಸೈಯದ್ ಸಾದತ್ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಾಲಯದ ಖಾಸಗಿ ಲಾಡ್ಜ್ ನಲ್ಲಿ 30 ವರ್ಷದ ಮಹಿಳೆಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಎರಡು ಮೂರು ದಿನಗಳ ಹಿಂದೆ ಹೊರಗಡೆಯಿಂದ ಬಂದ ಮಹಿಳೆ ವಸತಿ ಗೃಹದಲ್ಲಿ ತಂಗಿದ್ದಳು. ಮಹಿಳೆಯೊಂದಿಗೆ ಪುರುಷ ಕೂಡ ಬಂದಿದ್ದು ರೂಂ ಬಾಡಿಗೆಗೆ ಪಡೆದಿದ್ದರು ಎನ್ನಲಾಗುತ್ತಿದೆ. ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಮಿಥುನ್ ಕುಮಾರ್, ಹಣಗೆರೆಕಟ್ಟೆಯಲ್ಲಿ ಶವ ಪತ್ತೆಯಾಗಿದೆ. ಸುಮಾರು 30 ವರ್ಷದ ಮಹಿಳಾ ಪ್ರವಾಸಿಯಾಗಿದ್ದಾಳೆ. ಹೆಸರು ಮತ್ತು ಕೊಲೆಯಾಗಿರುವ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT