ಶಿವಮೊಗ್ಗ: ಇಂದಿನ ತಲೆಮಾರಿನವರಿಗೆ ಗಾಂಧೀಜಿ ವಿಚಾರ ಧಾರೆಗಳು ಎಟುಕಬೇಕು. ಅವುಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದುಸಾಹಿತಿ ಪ್ರೊ.ರಾಜೇಂದ್ರ ಚೆನ್ನಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸ್ನೇಹ ಬಳಗದಿಂದ ಭಾನುವಾರ ಆಯೋಜಿಸಿದ್ದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ‘ಗಾಂಧಿ ಕಥನ’ ಕೃತಿಯ ಲೇಖಕ ಡಿ.ಎಸ್. ನಾಗಭೂಷಣ ಅವರಿಗೆ ಅಭಿನಂದನೆ ಮತ್ತು ಅವರ ವಿವಿಧ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೊಡಗಿನ ಜಲಪ್ರಳಯವನ್ನು ವೈಜ್ಞಾನಿಕವಾಗಿ ನಾನಾ ರೀತಿಯಲ್ಲಿ ಅರ್ಥೈಸಲಾಗುತ್ತಿದೆ. ಆದರೆ, ಪ್ರಕೃತಿಯನ್ನು ಆಧಾರವಾಗಿಟ್ಟುಕೊಂಡು ಘಟನೆಯನ್ನು ಮನಗಂಡರೆ ಅದರ ನೈಜ ಅರ್ಥ ತಿಳಿದುಕೊಳ್ಳಬಹುದು. ಅದನ್ನು ಪುಸ್ತಕದಲ್ಲಿ ಅರ್ಥಪೂರ್ಣವಾಗಿ ತಿಳಿಸಲಾಗಿದೆ. ಪ್ರಜ್ಞೆಯೊಳಗೆ ಪ್ರಳಯವಾಗದ ಹೊರತು ಹೊರ ಜಗತ್ತಿನ ಪ್ರಳಯವನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದರು.

ನಾಗಭೂಷಣ್ ಅವರ ಗಾಂಧಿ ಕಥನದಲ್ಲಿ ಮಹಾತ್ಮ ಗಾಂಧಿ ಅವರನ್ನು ಪುನರ್ ವ್ಯಾಖ್ಯಾನ ಮಾಡಲು ಯತ್ನಿಸಿದ್ದಾರೆ. ಗಾಂಧೀಜಿ ಅವರ ತತ್ವಗಳನ್ನು ಪ್ರಸ್ತುತತೆಯಲ್ಲಿ ಹೇಗೆ ಅಳವಡಿಸಬೇಕು ಎನ್ನುವುದನ್ನು ಮನೋಜ್ಞವಾಗಿ ತಿಳಿಸಲಾಗಿದೆ ಎಂದು ತಿಳಿಸಿದರು.

ಸಹ್ಯಾದ್ರಿ ಕಾಲೇಜು ಸಹ ಪ್ರಾಧ್ಯಾಪಕ ಮೇಟಿ ಮಲ್ಲಿಕಾರ್ಜುನ್ ಮಾತನಾಡಿ, ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಯಾವುದೋ ಸಂದರ್ಭದಲ್ಲಿ ಹೇಳಿದ್ದನ್ನೇ ಆಧಾರವಾಗಿಟ್ಟುಕೊಂಡು ಸಂಸ್ಕೃತವನ್ನು ಆಡಳಿತ ಭಾಷೆಯಾಗಿ ಮಾಡಬೇಕು ಎಂದು ಪ್ರಸ್ತಾಪಿಸಲಾಗುತ್ತಿದೆ. ಅದನ್ನೇ ದಾಖಲೆ ರೂಪದಲ್ಲಿ ತೋರಿಸಲಾಗುತ್ತಿದೆ’ ಎಂದು ಹೇಳಿದರು.

ಗಾಂಧೀಜಿ ಅವರು ವ್ಯಕ್ತಿಯಾಗಿ ಉಳಿದಿಲ್ಲ. ಅವರು ಅಧ್ಯಯನದ ವಿಷಯವಾಗಿದ್ದಾರೆ. ಭಾರತ ಸೇರಿ ಹಲವೆಡೆ ಅವರ ಬಗ್ಗೆ ಅಧ್ಯಯನಗಳು ನಡೆಯುತ್ತಿವೆ. ಗಾಂಧಿ ಕಥನದಲ್ಲಿ ಬರಹಗಾರರು ವಿವಿಧ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಇರುವುದನ್ನು ಇರುವಂತೆಯೇ ನೇರವಾಗಿ ಹೇಳಿದ್ದಾರೆ. ಗಾಂಧೀಜಿ ಅವರನ್ನು ಸಾಮಾಜಿಕ, ರಾಜಕೀಯವಾಗಿ ಬೇರೆ ಬೇರೆ ರೀತಿಯಲ್ಲಿ ಅರ್ಥೈಸದೇ ಅವರ ವಿಚಾರಗಳನ್ನು ಇಂದಿನ ಪೀಳಿಗೆಗೆ ತಿಳಿಸುವ ಕೆಲಸ ಕೃತಿಯಲ್ಲಿ ಮಾಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಿ.ಎಸ್. ನಾಗಭೂಷಣ್ ಅವರನ್ನು ಸನ್ಮಾನಿಸಲಾಯಿತು. ಪ್ರೊ.ಸತ್ಯನಾರಾಯಣರಾವ್ ಅಣತಿ ಅಧ್ಯಕ್ಷತೆ ವಹಿಸಿದ್ದರು. ಎಂ. ಚಂದ್ರಶೇಖರಯ್ಯ ಅಭಿನಂದನಾ ನುಡಿಗಳನ್ನು ಆಡಿದರು.

ಗಾಂಧಿ ಬಗ್ಗೆ ತಪ್ಪು ಕಲ್ಪನೆ ಸಲ್ಲ
ಅಂಬೇಡ್ಕರ್ ಅವರಿಗೆ ದಕ್ಷಿಣ ಆಫ್ರಿಕಾದ ಗಾಂಧಿ ಬಗ್ಗೆ ಗೊತ್ತಿರಲಿಲ್ಲ. ಹೀಗಾಗಿ ಅವರಿಗೆ ಗಾಂಧೀಜಿ ಬಗ್ಗೆ ಸಂಶಯಗಳು ಇದ್ದವು. ಬಹುಶಃ ಅಂಬೇಡ್ಕರ್ ಅವರಿಗೆ ಗಾಂಧಿ ಬಗ್ಗೆ ಸರಿಯಾದ ಮಾಹಿತಿ ಇಲ್ಲದ ಕಾರಣ ಅವರನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ. ಇಂದಿಗೂ ದಕ್ಷಿಣ ಆಫ್ರಿಕಾದಲ್ಲಿದ್ದ ಗಾಂಧೀಜಿ ಬಗ್ಗೆ ಬಹಳಷ್ಟು ಮಂದಿಗೆ ಗೊತ್ತಿರಲಿಲ್ಲ. ಹೀಗಾಗಿ ಅವರ ಬಗ್ಗೆ ಹಲವರಲ್ಲಿ ತಪ್ಪು ಕಲ್ಪನೆಗಳಿವೆ ಎಂದು ಡಿ.ಎಸ್. ನಾಗಭೂಷಣ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.