ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದಕ ವ್ಯಸನಿಗಳಾಗುತ್ತಿರುವ ಯುವಜನ: ಚಂದ್ರಶೇಖರ್ ನಾಯ್ಕ್ ಕಳವಳ

Last Updated 24 ಅಕ್ಟೋಬರ್ 2021, 4:15 IST
ಅಕ್ಷರ ಗಾತ್ರ

ಸಾಗರ: ಇತ್ತೀಚಿನ ವರ್ಷಗಳಲ್ಲಿ ಯುವಜನರು ಮಾದಕ ವ್ಯಸನಿಗಳಾಗುತ್ತಿರುವುದು ದುರದೃಷ್ಟಕರ ಸಂಗತಿ. ಯುವಜನರನ್ನು ಸನ್ಮಾರ್ಗದತ್ತ ಕರೆತರುವ ನಿಟ್ಟಿನಲ್ಲಿ ಪರಿಣಾಮಕಾರಿ ಪ್ರಯತ್ನ ನಡೆಸಬೇಕು ಎಂದು ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ತಿಳಿಸಿದರು.

ಇಲ್ಲಿನ ಜಿಲ್ಲಾ ಪೊಲೀಸ್ ಇಲಾಖೆಯಿಂದ ಶನಿವಾರ ಸೈಬರ್ ಅಪರಾಧ ಮತ್ತು ಮಾದಕ ವ್ಯಸನ ಕುರಿತು ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗಾಂಜಾ, ಅಫೀಂ, ಚರಸ್‍ನಂತಹ ಮಾದಕ ವಸ್ತುಗಳ ಬಗ್ಗೆ ಯುವಸಮೂಹ ಹೆಚ್ಚು ಜಾಗೃತಿ ವಹಿಸಬೇಕು. ಒಂದು ಬಾರಿ ಇದಕ್ಕೆ ದಾಸರಾದರೆ ಭವಿಷ್ಯ ಹಾಳಾಗುತ್ತದೆ. ಸಾಮಾಜಿಕವಾಗಿ ತಲೆತಗ್ಗಿಸುವ ಸ್ಥಿತಿ ನಿರ್ಮಾಣವಾಗುತ್ತದೆ. ಶಾಲಾ–ಕಾಲೇಜು ಹಂತದಲ್ಲಿ ಮಕ್ಕಳಿಗೆ ಈ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತಿರುವುದು ಸ್ವಾಗತಾರ್ಹ
ಎಂದರು.

ನಗರ ಠಾಣೆ ಸಬ್ ಇನ್‌ಸ್ಪೆಕ್ಟರ್‌ ತುಕಾರಾಮ್ ಸಾಗರ್‍ಕರ್ ಮಾತನಾಡಿ, ‘ಮಕ್ಕಳ ಮೇಲೆ ದುಷ್ಪರಿಣಾಮ ಬೀರುವ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಅಗತ್ಯ. ಪೋಷಕರು ತಮ್ಮ ಮಕ್ಕಳ ಚಲನವಲನ ಬಗ್ಗೆ ನಿಗಾ ಇಡಬೇಕು. ಶಾಲಾ–ಕಾಲೇಜಿಗೆ ಮಕ್ಕಳನ್ನು ಕಳಿಸಿದ ತಕ್ಷಣ ತಮ್ಮ ಜವಾಬ್ದಾರಿ ಮುಗಿಯಿತು ಎಂದುಕೊಳ್ಳದೇ ಅವರು ಸರಿದಾರಿಯಲ್ಲಿ ಹೋಗುತ್ತಿದ್ದಾರಾ ಎಂದು ಗಮನ ಹರಿಸಬೇಕು’ ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಚಾರ್ಯ ಸುರೇಶ್ ಎಚ್., ಎ.ಎಸ್.ಐ. ಬಡಿಯಪ್ಪ, ಪೊಲೀಸ್ ಇಲಾಖೆಯ ಗಣಪತಿರಾವ್, ಮಲ್ಲೇಶ್
ಎಚ್.ಎಸ್. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT