ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬರಲು ಯುವ ಶಕ್ತಿಯೇ ಕಾರಣ. ದೇಶದಲ್ಲಿ ಮಾತು ಕೊಟ್ಟ ಹಾಗೆ ನಡೆದ ಯಾವುದಾದರೊಂದು ಪಕ್ಷ ಇದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಎಸ್.ಮಧು ಬಂಗಾರಪ್ಪ ಹೇಳಿದರು.

ಇಲ್ಲಿನ ಬಂಜಾರ ಕನ್ವೆನ್ಷನ್ ಸಭಾಭವನದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಘಟಕ ಹಮ್ಮಿಕೊಂಡಿದ್ದ ಯುವ ನಾಯಕತ್ವ ಸಮಾವೇಶ, ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಜವಾಬ್ದಾರಿ ಸ್ವೀಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಕಾಂಗ್ರೆಸ್ ರಾಜ್ಯದ ಜನರಿಗೆ ಭೂಮಿ ಹಕ್ಕು, ಐದು ಗ್ಯಾರಂಟಿಗಳ ಕೊಟ್ಟಿದೆ. ದೇಶದ ಅಭಿವೃದ್ಧಿ, ಕೃಷಿ, ಜಿಡಿಪಿ ಬೆಳವಣಿಗೆಗೆ ಪಕ್ಷ ಅನೇಕ ಕೊಡುಗೆಗಳ ನೀಡಿದೆ. ಗುಣಮಟ್ಟದ ಶಿಕ್ಷಣದ ಜೊತೆ ಉಚಿತ ಮೊಟ್ಟೆ, ಹಾಲು, ಶೂ ಎಲ್ಲವನ್ನೂ ರಾಜ್ಯ ಸರ್ಕಾರ ಮಕ್ಕಳಿಗೆ ನೀಡಿದೆ. ಇದನ್ನು ಪಕ್ಷದ ಯುವಕರು ಬೂತ್ ಮಟ್ಟದಲ್ಲಿ ಮನೆ ಮನೆಗೆ ತಲುಪಿಸಿ ಜನರ ಧ್ವನಿಯಾಗಬೇಕು’ ಎಂದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ‘ಇಂದಿನ ಕಾರ್ಯಕ್ರಮ ಅದೆಷ್ಟೋ ಯುವಕರಿಗೆ ದಾರಿದೀಪವಾಗಬೇಕು. ಹಿಂದೆ ಕಾಂಗ್ರೆಸ್ನಲ್ಲಿ ಪಕ್ಷದ ನಾಯಕರೇ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತಿದ್ದರು. ಆದರೆ ಈಗ ಚುನಾವಣೆಗಳ ಮೂಲಕ ಗೆದ್ದು ಯುವ ನಾಯಕರಾಗಿದ್ದೀರಿ. ನಿಮ್ಮ ಸಾಮರ್ಥ್ಯ ತೋರಿಸಿ ಪಕ್ಷ ಬಲಪಡಿಸಿ ಎಂದರು.
ಮೊದಲು ವಿದ್ಯಾರ್ಥಿ ಕಾಂಗ್ರೆಸ್ ಮೂಲಕ ಪಕ್ಷಕ್ಕೆ ಸೇವೆ ಸಲ್ಲಿಸಿ ಹಂತ ಹಂತವಾಗಿ ಸ್ಥಾನ ಮಾನ ಪಡೆದವರೂ ಇದ್ದಾರೆ. ಪಕ್ಷವನ್ನು ಕಟ್ಟಬೇಕಾದರೆ ಮೊದಲು ಯುವಕರ ತಂಡ ಕಟ್ಟಬೇಕು. ಯುವಕರನ್ನು ಗುರುತಿಸಬೇಕು’ ಎಂದರು.

ಯುವ ಕಾಂಗ್ರೆಸ್ ಮಾಜಿ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮಾತನಾಡಿ, ಸಂವಿಧಾನ ಉಳಿಸಲು ನಮ್ಮ ನಾಯಕರಾದ ರಾಹುಲ್ ಗಾಂಧಿ ದೇಶದಲ್ಲಿ 4500 ಕಿ.ಮೀ ಪಾದಯಾತ್ರೆ ಮಾಡಿದ್ದಾರೆ. ದೇಶದ ಜನರಿಗೆ ನೀಡಿದ ಭರವಸೆ ಪಕ್ಷ ಕಾಂಗ್ರೆಸ್ ಈಡೇರಿಸಿದೆ. ಬಿಜೆಪಿಯವರು ಸುಳ್ಳಿನ ಮೇಲೆ ಪಕ್ಷ ಕಟ್ಟುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಚ್ಛೇದಿನ್ ಎಂದು ಅಧಿಕಾರಕ್ಕೆ ಬಂದ ಬಿಜೆಪಿ ಬೆಲೆ ಏರಿಕೆ ಮಾಡುತ್ತಾ ಬಂದಿದೆ. ಸುಳ್ಳು, ಭ್ರಷ್ಟಾಚಾರ ಮೂಲಕವೇ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಪೆಟ್ರೋಲ್ ಬೆಲೆ ₹100 ದಾಟಿದೆ. ಬಡವರಿಗೆ ಸೂರು ಇಲ್ಲ. ನಿರುದ್ಯೋಗ ತಾಂಡವವಾಡುತ್ತಿದೆ. ಇದೇ ಬಿಜೆಪಿಯ ಸಾಧನೆ ಎಂದು ಲೇವಡಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ, ಪ್ರಮುಖರಾದ ಎಚ್.ಎಸ್. ಸುಂದರೇಶ್, ರವಿಕುಮಾರ್, ಪಲ್ಲವಿ, ಆಯನೂರು ಮಂಜುನಾಥ್, ಶ್ರೀನಿವಾಸ ಕರಿಯಣ್ಣ, ಎಚ್.ಸಿ. ಯೋಗೀಶ್, ಎನ್. ರಮೇಶ್, ಎಂ. ಶ್ರೀಕಾಂತ್, ಗೋಣಿ ಮಾಲತೇಶ್, ಮಧುಸೂದನ್, ವಿಜಯಕುಮಾರ್ (ದನಿ), ವೇದಾ ವಿಜಯಕುಮಾರ್, ಚೇತನ್, ಯಮುನಾ ರಂಗೇಗೌಡ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.