ಮಂಗಳವಾರ, 28 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮ್ಮ ಅಪ್ಪನ ಆಣೆ ನೀವಿಬ್ಬರೂ ಸಿಎಂ ಆಗುವ ಪ್ರಶ್ನೆಯೇ ಇಲ್ಲ: ಯಡಿಯೂರಪ್ಪ

Last Updated 22 ಜುಲೈ 2022, 10:06 IST
ಅಕ್ಷರ ಗಾತ್ರ

ಶಿಕಾರಿಪುರ:ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಯಾಗುತ್ತೇವೆ ಎಂದು ಓಡಾಡುತ್ತಿದ್ದಾರೆ. ಅವರಿಗೆ ಕಿವಿಮಾತು ಹೇಳಲು ಇಚ್ಚಿಸುತ್ತೇನೆ.ನಿಮ್ಮ ಅಪ್ಪನ ಆಣೆ ನೀವು ಮುಖ್ಯಮಂತ್ರಿಯಾಗುವ ಪ್ರಶ್ನೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಪರೋಕ್ಷ ವಾಗ್ದಾಳಿ ನಡೆಸಿದರು.

ತಾಲ್ಲೂಕಿನ ಆಂಜನಾಪುರ ಗ್ರಾಮ ಸಮೀಪ ಶುಕ್ರವಾರ ನಡೆದ ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪಕ್ಷ ಸಂಘಟನೆಗೆ ರಾಜ್ಯದಲ್ಲಿ ಓಡಾಡುತ್ತೇನೆ. ರಾಜ್ಯದಲ್ಲಿ ನೂರಕ್ಕೆ ನೂರು ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬರುತ್ತದೆ. ಬಿಜೆಪಿಯವರೇ ಮುಖ್ಯಮಂತ್ರಿಯಾಗುತ್ತಾರೆ ಈ ಬಗ್ಗೆ ಅನುಮಾನ ಬೇಡ ಎಂದರು.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT