ಶಿವಮೊಗ್ಗ: ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಘನತ್ಯಾಜ್ಯ ವಿಲೇವಾರಿ ಘಟಕಸ್ಥಾಪಿಸಿ, ವ್ಯವಸ್ಥಿತವಾಗಿ ಕಸವಿಲೇವಾರಿಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪತಾಕೀತು ಮಾಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ271 ಗ್ರಾಮ ಪಂಚಾಯಿತಿಗಳಲ್ಲಿ53ರಲ್ಲಿಘಟಕ ಸ್ಥಾಪನೆಗೆ ಜಮೀನು ಗುರುತಿಸಲಾಗಿದೆ. 48 ಪ್ರಸ್ತಾವನೆಗಳಿಗೆ ಅನುಮೋದನೆ ದೊರೆತಿದೆ. ಕೇವಲ 12 ಪಂಚಾಯಿತಿಗಳುಕಾರ್ಯ ಆರಂಭಿಸಿವೆ.ಜಮೀನು ಅಂತಿಮಗೊಳಿಸದಕಡೆಹಳೆ ಕಟ್ಟಡಗಳಲ್ಲಿ ತ್ಯಾಜ್ಯ ವಿಲೇವಾರಿ ಕಾರ್ಯ ಆರಂಭಿಸಬೇಕು. ಈಗಾಗಲೇ ಅನುದಾನ ಬಿಡುಗಡೆಯಾಗಿರುವ ಪಂಚಾಯಿತಿಗಳಲ್ಲಿ ವಾಹನ ಖರೀದಿ, ಬಕೆಟ್ ಖರೀದಿ, ಶೆಡ್ ನಿರ್ಮಾಣ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದುಸೂಚಿಸಿದರು.

ಪ್ರತಿ ಮನೆಗೆ ಕುಡಿಯುವ ನೀರು:

ಎಲ್ಲಾ ಗ್ರಾಮ ಪಂಚಾಯತಿವ್ಯಾಪ್ತಿಯಲ್ಲೂ ಮನೆ ಮನೆಗೆ ಗಂಗೆ ಯೋಜನೆಜಾರಿಗೆ ಸಿದ್ಧತೆ ನಡೆದಿದೆ. ಪ್ರತಿ ಮನೆಗೂ ನೀರು ಸರಬರಾಜು ಮಾಡುವ ಈ ಯೋಜನೆಗೆ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದೆ. ಈಗಾಗಲೇ ನಲ್ಲಿ ಸಂಪರ್ಕ ಇರುವ ಮನೆಗಳನ್ನು ಹೊಸದಾಗಿ ಕ್ರಿಯಾ ಯೋಜನೆಯಲ್ಲಿ ಸೇರಿಸಬಾರದು. ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಕಾರ್ಯ ಆಯಾ ಗ್ರಾಮ ಪಂಚಾಯತಿಗಳೇ ನಿರ್ವಹಿಸಬೇಕು. ಅದಕ್ಕಾಗಿ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಉದ್ಯೋಗ ಖಾತ್ರಿ ಅನುಷ್ಠಾನ: ಉದ್ಯೋಗ ಖಾತ್ರಿಗೆ ಈ ವರ್ಷ ₨218 ಕೋಟಿ ಅನುದಾನ ನಿಗದಿಪಡಿಸಲಾಗಿದೆ.ಎಲ್ಲಾ ಇಲಾಖೆಗಳೂತಮಗೆ ನಿಗದಿಪಡಿಸಿರುವ ಮಾನವ ದಿನಗಳ ಗುರಿ ಪೂರ್ಣಗೊಳಿಸಬೇಕು. ಸಾಮಾಜಿಕ ಅರಣ್ಯ ಇಲಾಖೆ ಇದುವರೆಗೆ ಯಾವುದೇ ಗುರಿ ಸಾಧಿಸಿಲ್ಲ. ಹಿಂದಿನ ವರ್ಷದ ಅಪೂರ್ಣ ಕಾಮಗಾರಿ ತಕ್ಷಣ ಪೂರ್ಣಗೊಳಿಸಬೇಕು ಎಂದುತಾಕೀತು ಮಾಡಿದರು.

ವೈಜ್ಞಾನಿಕತೆರಿಗೆ ನಿಗದಿ:ಎಲ್ಲ ಗ್ರಾಮ ಪಂಚಾಯಿತಿಗಳೂಎರಡು ವರ್ಷಗಳಿಗೊಮ್ಮೆ ಮೌಲ್ಯ ಮಾಪನ ಮಾಡಿ ವೈಜ್ಞಾನಿಕತೆರಿಗೆ ನಿಗದಿಪಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಕೆ.ಎಲ್.ಅತೀಕ್ಸೂಚಿಸಿದರು.

ಇಲಾಖೆ ಆಯುಕ್ತ ಅನಿರುದ್ಧ ಶ್ರವಣ್, ಸಿಇಒ ಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.