ಶಿವಮೊಗ್ಗ: ನಗರದ ಅಶೋಕನಗರ ಬಡಾವಣೆಯಲ್ಲಿ ಈಚೆಗೆ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ಸ್ಥಳೀಯ ಮಹಿಳಾ ಸ್ವ ಸಹಾಯ ಸಂಘದ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ಗೆ ಮನವಿ ಸಲ್ಲಿಸಿದರು.

ಜುಲೈ 7ರಂದು ಅದೇ ಬಡಾವಣೆಯ ಕಾಮುಕನೊಬ್ಬ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ. ಈ ಘಟನೆಯಿಂದ ಬಾಲಕಿ ಮಾನಸಿಕವಾಗಿ ಕುಗ್ಗಿ ಹೋಗಿದ್ದು, ಅವರ ಕುಟುಂಬದ ಸದಸ್ಯರು ದುಃಖದಲ್ಲಿ ಮುಳುಗಿದ್ದಾರೆ. ಈಗ ಬಾಲಕಿ ಹಾಗೂ ಅವರ ಕುಟುಂಬ ಸದಸ್ಯರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಸಂಬಂಧಿಸಿದ ಇಲಾಖೆ ಮಾಡಬೇಕು ಎಂದು ಸದಸ್ಯರು ಆಗ್ರಹಿಸಿದರು.

ಈ ಘಟನೆ ನಡೆದ ನಂತರ ಅಶೋಕನಗರ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಹಿಳೆಯರು, ಯುವತಿಯರು, ಬಾಲಕಿಯರಲ್ಲಿ ಆತಂಕ ಮನೆ ಮಾಡಿದೆ. ಮನೆಯಿಂದ ಹೊರ ಹೋಗಲು ಭಯಪಡುತ್ತಿದ್ದಾರೆ.

ಹಾಗಾಗಿ, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಬಾಲಕಿ ಹಾಗೂ ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು. ಸಂಘದ ಪ್ರಮುಖರಾದ ರಾಧಾ, ಶಾರದಾ ಮತ್ತಿತರರು ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.