ಶಿವಮೊಗ್ಗ: ಬಿಜೆಪಿ ಜತೆ ಸೇರುವ ಅಥವಾ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಪ್ರಸ್ತಾಪ ಮಾಡುವ ಮೂಲಕ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಕಾರ್ಯಕರ್ತರಲ್ಲಿ ಮತ್ತು ಮತದಾರರಲ್ಲಿ ಗೊಂದಲ ಉಂಟುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಜ್ಯಸಭೆ ಸದಸ್ಯ ಆಯನೂರು ಮಂಜುನಾಥ ಅರೋಪಿಸಿದರು.

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಯಡಿಯೂರಪ್ಪ ಬಿಜೆಪಿ ಸೇರುತ್ತಾರೆ; ಎನ್ಡಿಎ ಜತೆ ಮೈತ್ರಿ ಮಾಡಿಕೊಳ್ಳುತ್ತಾರೆ ಎಂಬ ಊಹಾಪೋಹಗಳ ಮೂಲಕ ಗೊಂದಲದ ವಾತಾವರಣ ಉಂಟು ಮಾಡಲಾಗುತ್ತಿದೆ. ಯಡಿಯೂರಪ್ಪ ನೇರವಾಗಿ ಈ ಬಗ್ಗೆ ಪ್ರಸ್ತಾಪಿಸದೇ ಧನಂಜಯ ಕುಮಾರ್ ಮೂಲಕ ಹೇಳಿಕೆ ನೀಡುತ್ತಿದ್ದಾರೆ. ಧನಂಜಯ್ ಕುಮಾರ್ ಮಾತಿಗೆ ಕೆಜೆಪಿಯಲ್ಲೆ ತೂಕವಿಲ್ಲ ಎಂದು ಕುಟುಕಿದರು.

ಬಿಜೆಪಿಯೇತರ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಯಡಿಯೂರಪ್ಪ ತಿಳಿಸಿದರೆ, ಮೋದಿ ಮಧ್ಯಪ್ರವೇಶಿಸಿದರೆ, ಬಿಜೆಪಿಗೇ ಹೋಗುವುದಾಗಿ ಧನಂಜಯಕುಮಾರ್ ಹೇಳುತ್ತಿದ್ದಾರೆ. ಎಲ್ಲಿ ಅಕ್ಟೋಬರ್ನಲ್ಲೆ ಲೋಕಸಭೆ ಚುನಾವಣೆ ಬಂದು ಬಿಡುವುದೋ ಎಂಬ ಆತಂಕದಲ್ಲಿ, ಗೊಂದಲದಲ್ಲಿ ಕೆಜೆಪಿ ಇದೆ. ಲೋಕಸಭೆ ಚುನಾವಣೆ ಮುಗಿದರೆ ಕೆಜೆಪಿ ಕೇಳುವವರೇ ಇರುವುದಿಲ್ಲ. ಹೀಗಾಗಿ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಟೀಕಿಸಿದರು.

ಯಡಿಯೂರಪ್ಪ ಬಿಜೆಪಿ ಸೇರುವ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ. ಕೇಂದ್ರದಲ್ಲಿ ದಶಕಗಳ ಕಾಲ ಎನ್ಡಿಎ ಜತೆ ಇದ್ದವರು ಮೈತ್ರಿ ಬಿಟ್ಟು ಹೋಗುವಾಗ ಪಕ್ಷ ನಿಷ್ಠುರವಾಗಿ ವರ್ತಿಸಿದೆ. ಬಿಜೆಪಿ ಬಲ ಪಡೆದುಕೊಂಡರೆ, ಬಿಟ್ಟು ಹೋದವರು ತಾವಾಗಿಯೇ ಬಿಜೆಪಿಗೆ ಬರುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದರು.

ಜಿಲ್ಲಾ ಘಟಕದ ಅಧ್ಯಕ್ಷ ಆರ್.ಕೆ.ಸಿದ್ದರಾಮಣ್ಣ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ಎಂ.ಬಿ.ಭಾನುಪ್ರಕಾಶ್, ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಎಸ್ ದತ್ತಾತ್ರಿ, ಗಿರೀಶ್ ಪಟೇಲ್, ಲಕ್ಷ್ಮಣ್, ರಂಗೋಜಿ, ಬಸವರಾಜಪ್ಪ, ಸುವರ್ಣಾ ಶಂಕರ್ ಉಪಸ್ಥಿತರಿದ್ದರು.

25ಕ್ಕೆ ಉತ್ತರಾಖಂಡ ಸಂತ್ರಸ್ತರ ಪರಿಹಾರ ನಿಧಿ ಸಂಗ್ರಹ
ಶಿವಮೊಗ್ಗ: ಉತ್ತರಾಖಂಡ ರಾಜ್ಯದ ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವು ನೀಡಲು ಜೂ. 25ರಂದು ಬಿಜೆಪಿ ಜಿಲ್ಲಾ ಘಟಕ ನಿಧಿ ಸಂಗ್ರಹಣ ಕಾರ್ಯಕ್ರಮ ಆಯೋಜಿಸಿದೆ ಎಂದು ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ ತಿಳಿಸಿದರು.

ಗ್ರಾಮಸಭೆ ನಡೆದ ಸದಸ್ಯರ ಸದಸ್ಯತ್ವ ಅನೂರ್ಜಿತಗೊಳಿಸುವ ಮಸೂದೆ ವಿರೋಧಿಸಿ ನಗರದಲ್ಲಿ ಜುಲೈ 8ರಂದು ಜಿಲ್ಲೆಯ ಗ್ರಾಮ ಪಂಚಾಯ್ತಿ ಸದಸ್ಯರ ಸಮಾವೇಶ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.