ಶಿವಮೊಗ್ಗ: ಜಿಲ್ಲಾಧಿಕಾರಿ ವಿ. ಪೊನ್ನುರಾಜ್ ಅವರನ್ನು ಇನ್ನೂ ನಾಲ್ಕು ವರ್ಷ ವರ್ಗಾವಣೆ ಮಾಡದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರಿಗೆ ಮನವಿ ಮಾಡಿದರು.

ಜಿ.ಪಂ. ಸಭಾಂಗಣದಲ್ಲಿ ಗುರುವಾರ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈಗ ನಡೆಯುತ್ತಿರುವ ಕಾಮಗಾರಿಗಳು ಬೇಗ ಪೂರ್ಣಗೊಳ್ಳಬೇಕಾದರೆ ಇವರ ಸೇವೆ ಜಿಲ್ಲೆಗೆ ಕನಿಷ್ಠ 4 ವರ್ಷ ಬೇಕು ಎಂದರು.

ಇದಕ್ಕೂ ಮುನ್ನ ನಗರದ ಗಾಂಧಿಪಾರ್ಕ್‌ನಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲನೆ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ, ಈಗಾಗಲೇ ಕೈಗೆತ್ತಿಕೊಂಡಿರುವ ಕಾಮಗಾರಿ, ಯೋಜನೆ ಸಂಪೂರ್ಣ ಆಗುವವರೆಗೂ ನೀವು ವರ್ಗಾವಣೆ ಮಾಡಿಸಿಕೊಳ್ಳುವಂತಿಲ್ಲ ಎಂದು ಪೊನ್ನುರಾಜ್ ಅವರಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.