ಶಿವಮೊಗ್ಗ: ಹಿಂದಿನವರ ಅಪೇಕ್ಷೆಯಂತೆ ಇತಿಮಿತಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ತಾವು ಬದ್ಧ ಎಂದು ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಿ.ವಿ. ಸದಾನಂದಗೌಡ ಹೇಳಿದರು.

ನಗರದ ಸಂಸ್ಕೃತ ಭವನದ ಸಮೀಪ ರೂ.118 ಕೋಟಿ ವೆಚ್ಚದ ತುಂಗಾ ನದಿಗೆ ರಕ್ಷಣಾ ಗೋಡೆ ನಿರ್ಮಾಣ ಕಾರ್ಯಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಚುನಾಯಿತ ಪ್ರತಿನಿಧಿಗಳಿಗೆ ಇಚ್ಛಾಶಕ್ತಿ ಇದ್ದಲ್ಲಿ ಹೇಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯವೆಂಬುದನ್ನು ಇಲ್ಲಿನ ಜನಪ್ರತಿನಿಧಿಗಳು ತೋರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಹೇಳದೆ ಸದಾನಂದಗೌಡ ಮಾತನಾಡಿದರು.

ತುಂಗಾನದಿ ದಂಡೆಗೆ ರಕ್ಷಣಾಗೋಡೆ ನಿರ್ಮಿಸಲು ಈಗಾಗಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ರೂ. 66.16ಕೋಟಿ ಮಂಜೂರಾಗಿದ್ದು, ಹೆಚ್ಚುವರಿಯಾಗಿ ರಕ್ಷಣಾಗೋಡೆ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲು ರಾಜ್ಯ ಸರ್ಕಾರದಿಂದ ರೂ. 52 ಕೋಟಿ ಮಂಜೂರು ಮಾಡಲಾಗಿದೆ ಎಂದರು.

ಸಮಾರಂಭದಲ್ಲಿ ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ ಮಾತನಾಡಿ, ಪ್ರಥಮ ಹಂತದಲ್ಲಿ ತುಂಗಾ ರಕ್ಷಣಾ ಗೋಡೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ರೂ. 26.16 ಕೋಟಿ ನೀಡಿತ್ತು. ಇದಕ್ಕೆ ಪೂರಕವಾಗಿ ಕೇಂದ್ರದಿಂದ ರೂ. 40 ಕೋಟಿ ಅನುದಾನ ತರಲಾಗಿದೆ. ಇದೇ ರೀತಿ ಭದ್ರಾವತಿ ಸಮೀಪದಲ್ಲಿ ಭದ್ರಾನದಿಗೆ ರಕ್ಷಣಾಗೋಡೆ ನಿರ್ಮಿಸಲು ಕೇಂದ್ರದಿಂದ ರೂ. 86 ಕೋಟಿ ಅನುದಾನ ಬಿಡುಗಡೆಯಾಗಿದೆ. ಸದ್ಯದಲ್ಲೇ ಅಲ್ಲಿಯೂ ಕಾಮಗಾರಿ ಆರಂಭಿಸಲಾಗುವುದು ಎಂದರು.

ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರದಿಂದ ವಿಶೇಷ ಅನುದಾನ ತರಲು ತಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ರಾಘವೇಂದ್ರ ತಿಳಿಸಿದರು.

ನಗರಸಭಾ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ತುಂಗಾ ರಕ್ಷಣಾಗೋಡೆ ನಿರ್ಮಾಣದ ಜತೆಗೆ ಶುದ್ಧ ತುಂಗಾ ಯೋಜನೆಯಡಿ ತುಂಗಾ ನದಿಗೆ ಸೇರುತ್ತಿದ್ದ ನಗರದ ಕೊಳಚೆ ನೀರನ್ನು ಶುದ್ಧೀಕರಿಸಿ ನದಿಗೆ ಬಿಡುವ ಕಾರ್ಯಕ್ಕೆ ರಾಜ್ಯ ಸರ್ಕಾರ ಐದು ಕೋಟಿ ಅನುದಾನ ನೀಡಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಎಸ್. ಈಶ್ವರಪ್ಪ ಮಾತನಾಡಿ, ಹರಕೆರೆಯಿಂದ ಚಟ್ನಹಳ್ಳಿವರೆಗೆ ರಕ್ಷಣಾಗೋಡೆ ನಿರ್ಮಿಸಲೂ ಉದ್ದೇಶಿಸಿದ್ದು, ರಕ್ಷಣಾಗೋಡೆ ನಿರ್ಮಾಣದ ಜತೆಗೆ ವಾಕಿಂಗ್ಪಾತ್ ಸಹ ನಿರ್ಮಾಣವಾಗಲಿದೆ ಎಂದರು.

ಸಭೆಯಲ್ಲಿ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಕೆ.ಜಿ. ಕುಮಾರಸ್ವಾಮಿ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಗಿರೀಶ್ ಪಟೇಲ್, `ಸೂಡಾ~ ಅಧ್ಯಕ್ಷ ಎಸ್. ದತ್ತಾತ್ರಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಶುಭಾ ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ, ಸಿಇಓ ಡಾ.ಸಂಜಯ್ ಬಿಜ್ಜೂರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.