ಶಿವಮೊಗ್ಗ: "ದಂಡಾವತಿ ಯೋಜನೆ ಪೂರ್ಣಗೊಳಿಸಲು ಬದ್ಧನಾಗಿದ್ದೇನೆ’ ಎಂದು ಬಿಜೆಪಿ ಮುಖಂಡ ಬಂಗಾರಪ್ಪ ಘೋಷಿಸಿದರು.

ಪ್ರೆಸ್‌ಟ್ರಸ್ಟ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಸಣ್ಣ ನೀರಾವರಿ ಸಚಿವನಾಗಿದ್ದಾಗ ಕ್ಷೇತ್ರದಲ್ಲಿ ಹಲವು ಏತ ನೀರಾವರಿ ಯೋಜನೆಗಳಿಗೆ ಮಂಜೂರಾತಿ ನೀಡಿದ್ದೆ. ದಂಡಾವತಿ ಯೋಜನೆಗೆ ನೀಲಿನಕ್ಷೆಯೂ ಸಿದ್ಧವಾಗಿತ್ತು. ಆದರೂ, ರಾಜಕೀಯ ವಿರೋಧಿಗಳು ಇಲ್ಲಸಲ್ಲದ ಆಪಾದನೆ ಮಾಡುತ್ತಿದ್ದಾರೆ’ ಎಂದು ದೂರಿದರು.

ಜಿಲ್ಲಾ ಉಸ್ತುವಾರಿ ಮಂತ್ರಿ ಕಾಗೋಡು ತಿಮ್ಮಪ್ಪ, ಸೊರಬ ಶಾಸಕ ಮಧು ಬಂಗಾರಪ್ಪ ಬಗರ್‌ಹುಕುಂ ಹೆಸರಿನಲ್ಲಿ ರೈತರಿಗೆ ಅನ್ಯಾಯ ಎಸಗಿದ್ದಾರೆ. ಕಿಮ್ಮನೆ ರತ್ನಾಕರ ಅತ್ಯಂತ ದುರ್ಬಲ ಮಂತ್ರಿಯಾಗಿದ್ದರು. →ಕಾಗೋಡು ತಿಮ್ಮಪ್ಪ ಭ್ರಷ್ಟ ಸಚಿವ ಎಂದು ಆರೋಪಿಸಿದರು.

ಕಾಗೋಡು ತಿಮ್ಮಪ್ಪ ಅಭಿವೃದ್ಧಿ ಬದಲು ಅಧಿಕಾರ ದುರುಪಯೊಗ ಮಾಡಿಕೊಂಡು ಜನರನ್ನು ತಪ್ಪು ದಾರಿಗೆ ಎಳೆದಿದ್ದಾರೆ.

ಸೊರಬ ತಾಲ್ಲೂಕಿನಲ್ಲಿ ಶಾಸಕ ಮಧು ಬಂಗಾರಪ್ಪ ಜತೆ ಸೇರಿಕೊಂಡು ಬಗರ್‌ಹುಕುಂ ಸಾಗುವಳಿದಾರರಿಗೆ ಅನ್ಯಾಯ ಎಸಗಿದ್ದಾರೆ. ಸಾಕಷ್ಟು ಅವ್ಯವಹಾರ ನಡೆಸಿದ್ದಾರೆ. ಸೊರಬ ಕ್ಷೇತ್ರದಲ್ಲಿ ನಡೆದಿರುವ ಅವ್ಯವಹಾರ ಕುರಿತು ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕಿದೆ ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಶೂನ್ಯ. ಜಿಲ್ಲೆಯಲ್ಲೂ ಅಭಿವೃದ್ಧಿ ಕುಂಠಿತಗೊಂಡಿದೆ. ಸೊರಬ ಕ್ಷೇತ್ರದ ಅಭಿವೃದ್ಧಿಗೆ ಸಾವಿರಾರು ಕೋಟಿ ಅನುದಾನ ತಂದಿರುವುದಾಗಿ ಶಾಸಕರು ಹೇಳಿಕೆ ನೀಡುತ್ತಾರೆ. ಆದರೆ, ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ರಸ್ತೆಗಳು ಸಂಪೂರ್ಣ ಹಾಳಾಗಿವೆ. ನೀರಾವರಿ ಯೋಜನೆಗಳು ನನೆಗುದಿಗೆ ಬಿದ್ದಿವೆ. ಹಾಗಾದರೆ ಬಿಡುಗಡೆಯಾದ ಅನುದಾನ ಎಲ್ಲಿಗೆ ಹೋಗಿದೆ ಎಂದು ಪ್ರಶ್ನಿಸಿದರು.

ಪ್ರೆಸ್‌ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್, ಕಾರ್ಯದರ್ಶಿ ಶಿ.ವಿ. ಸಿದ್ದಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.