ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಶ್ರೀಧರ್ ಕಲ್ಲಹಳ್ಳ ಶನಿವಾರ ನಾಮಪತ್ರ ಸಲ್ಲಿಸಿದರು.
ರೈತ ಮುಖಂಡ ಕಡಿದಾಳು ಶಾಮಣ್ಣ, ಎಚ್.ಆರ್.ಬಸವರಾಜಪ್ಪ, ಎಚ್.ಎನ್.ಚಂದ್ರಶೇಖರ್ ಹಾಗೂ ಕೃಷ್ಣಮೂರ್ತಿ ಶಿರಸಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ನಗರದ ಬಸ್‌ನಿಲ್ದಾಣದಿಂದ ಮೆರವಣಿಗೆ ಹೊರಟ ಕಾರ್ಯಕರ್ಯರು ಅಮೀರ್ ಅಹಮದ್ ವೃತ್ತ, ಗೋಪಿ ವೃತ್ತ, ಮಹಾವೀರ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಭ್ಯರ್ಥಿ ಶ್ರೀಧರ್ ಕಲ್ಲಹಳ್ಳ, ದೆಹಲಿ ವಿಧಾನಸಭೆಯಲ್ಲಿ ಮೂಡಿಬಂದ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಯಲ್ಲಿ ಪುನಾರಾವರ್ತನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗ ಕ್ಷೇತ್ರದಲ್ಲಿ ತಮ್ಮ ಗೆಲುವು ನಿಶ್ಚಿತ. ಯಾವುದೇ ಅನುಮಾನ ಬೇಡ ಎಂದ ಅವರು, ಹಲವು ವರ್ಷಗಳಿಂದ ರೂಢಿಗತ ರಾಜಕೀಯ ಪಕ್ಷಗಳ ಆಳ್ವಿಕೆ ಯಿಂದ ನಾಗರೀಕರು ಬೇಸತ್ತು ಹೋಗಿದ್ದಾರೆ ಎಂದರು. ಪಕ್ಷಕ್ಕೆ ರೈತ ಸಂಘ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ ಎಂದ ಅವರು, ಲೋಕಸಭಾ ಚುನಾವಣೆಯಲ್ಲಿ ರೂಢಿಗತ ರಾಜಕೀಯ ಪಕ್ಷಗಳಿಗೆ ಪಕ್ಷ ಉತ್ತಮ ಪೈಪೋಟಿ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಡಿದಾಳು ಶಾಮಣ್ಣ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಭ್ರಷ್ಟಾಚಾರ, ಕೋಮುವಾದಿ ರಾಜಕಾರಣಿಗಳ ವಿರುದ್ಧ ಹೋರಾಟ ಮಾಡಲು ಆಮ್ ಆದ್ಮಿ ಪಕ್ಷ ನಿರ್ಣಾಯಕ ಎಂದು ತಿಳಿಸಿದರು. ಹಿಂದೆ ಸಮಾಜವಾದಿ ಪಕ್ಷ ಚುನಾವಣೆಗಳಲ್ಲಿ ‘ನೋಟಿನ ಜೊತೆ ಓಟು’ ಎಂಬ ಘೋಷಣೆಯೊಂದಿಗೆ ಮತದಾರರಿಂದಲೇ ಚುನಾವಣಾ ವೆಚ್ಚಕ್ಕೆ ಬೇಕಾದ ಹಣ ಸಂಗ್ರಹಿಸಿ ಮತಯಾಚನೆ ಮಾಡುತ್ತಿತ್ತು. ಅದೇ ರೀತಿ ಆಮ್ ಆದ್ಮಿ ಪಕ್ಷ ಕೂಡ ಚುನಾವಣೆ ಎದುರಿಸಲಿದೆ ಎಂದು ತಿಳಿಸಿದರು. ಸಮಾಜವಾದಿ ತತ್ವದ ಆಧಾರದ ಮೇಲೆ ಅಭ್ಯರ್ಥಿ ಶ್ರೀಧರ್ ಕಲ್ಲಹಳ್ಳ ಅವರ ಠೇವಣಿ ಮೊತ್ತ ರೂ 25ಸಾವಿರ ತಮ್ಮ ಕುಟುಂಬದಿಂದ ನೀಡಲಾಗಿದೆ ಎಂದು ಕಡಿದಾಳು ಶಾಮಣ್ಣ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.