ಶಿವಮೊಗ್ಗ: ದೇಶದ ಮಹನೀಯರು ಕಂಡಿದ್ದ ಆದರ್ಶ ರಾಮರಾಜ್ಯದ ಕನಸನ್ನು ಸಕಾರಗೊಳಿಸುವ ಕಾರ್ಯ ಯುವಜನತೆಯ ಮೇಲಿದೆ ಎಂದು ಇನ್ಫೋಸಿಸ್‌ನ ಸಂಸ್ಥಾಪಕ ಅಧ್ಯಕ್ಷ ಡಾ.ಎನ್.ಆರ್. ನಾರಾಯಣ ಮೂರ್ತಿ ತಿಳಿಸಿದರು.

ನಗರದ ಜವಹರ್‌ಲಾಲ್ ನೆಹರು ರಾಷ್ಟ್ರೀಯ ಎಂಜಿನಿಯರಿಂಗ್ ಕಾಲೇಜಿನ ಅನನ್ಯ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವಜನತೆ ಲಭ್ಯವಿರುವ ಅಗಾಧ ಅವಕಾಶಗಳನ್ನು ಬಳಸಿಕೊಂಡು ದೇಶ ಕಟ್ಟುವ ಕಾರ್ಯ ಮಾಡಬೇಕು. ದೇಶಕ್ಕೆ ಮೂಲಸೌಕರ್ಯ ಉತ್ತಮಪಡಿಸಿ, ದೇಶ ಸಾಧಿಸಿರುವ ಆರ್ಥಿಕ ಪ್ರಗತಿಯನ್ನು ಮುಂದುವರಿಸಿಕೊಂಡು ಆ ಮೂಲಕ ಸಮಾಜದಲ್ಲಿರುವ ಅಸಮಾನತೆ ತೆಗೆದುಹಾಕಬೇಕು ಎಂದರು.

ಪ್ರತಿಯೊಬ್ಬ ವಿದ್ಯಾರ್ಥಿಯು ಜೀವನದಲ್ಲಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯ ಮಾಡಬೇಕು ಎಂದರು.

ಪ್ರಾಂಶುಪಾಲ ಡಾ.ಶ್ರೀನಿವಾಸ್ ಕುಂಠೆ, ಎನ್‌ಇಎಸ್ ಕಾರ್ಯದರ್ಶಿ ಎಸ್.ವಿ. ತಿಮ್ಮಯ್ಯ, ನಿರ್ದೇಶಕ ಡಾ.ಪಿ. ನಾರಾಯಣ್ ಮತ್ತಿತರರು ಉಪಸ್ಥಿತರಿದ್ದರು.

ಜೆಡಿಎಸ್‌ಗೆ ಆಯ್ಕೆ
ರಿಪ್ಪನ್‌ಪೇಟೆ: ಹೊಸನಗರ ತಾಲ್ಲೂಕು ಜನತಾದಳದ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿ ಎಸ್. ಮಹಮ್ಮದ್ ಖಾನ್ ಆಯ್ಕೆಯಾಗಿದ್ದಾರೆ.

ಜೆಡಿಎಸ್ ರಾಜ್ಯ ಘಟಕದಎಚ್.ಡಿ. ಕುಮಾರಸ್ವಾಮಿ, ರಾಜ್ಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಚ್.ಎಂ. ಷಕೀಲಾ ನವಾಜ್, ಜಿಲ್ಲಾ ಅಧ್ಯಕ್ಷ ಎಂ. ಶ್ರೀಕಾಂತ, ಜ್ಲ್ಲಿಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ. ಸಮೀವುಲ್ಲಾ ಅವರನ್ನು ಜಿಲ್ಲಾ ಮುಖಂಡ ಆರ್.ಎ. ಚಾಬುಸಾಬ್ ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.