ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿದ್ಯಾರ್ಥಿಗಳಿಗೆ ಜೀವನ ಮೌಲ್ಯ ಕಲಿಸಿ’

ಶಿಕಾರಿಪುರ: ಸ್ವಾಮಿ ವಿವೇಕಾನಂದ ಜಯಂತಿ
Last Updated 14 ಜನವರಿ 2017, 8:51 IST
ಅಕ್ಷರ ಗಾತ್ರ
ಶಿಕಾರಿಪುರ: ‘ವಿದ್ಯಾರ್ಥಿಗಳನ್ನು ಶಿಕ್ಷಣಕ್ಕೆ ಮಾತ್ರ ಸೀಮಿತಗೊಳಿಸದೆ ದೇಶದ ವೈಚಾರಿಕತೆ, ಪರಂಪರೆ, ಸಂಸ್ಕೃತಿಯನ್ನು ಎತ್ತಿ ಹಿಡಿಯುವಂತಹ ಜೀವನ ಮೌಲ್ಯ
ಗಳನ್ನು ಕಲಿಸಬೇಕು’ ಎಂದು ಅಂಕಣಕಾರ ದು.ಗು.ಲಕ್ಷ್ಮಣ್ ಶಿಕ್ಷಕರಿಗೆ ಸಲಹೆ ನೀಡಿದರು.
 
ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಗುರುವಾರ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 
‘ವಿದ್ಯಾರ್ಥಿಗಳು ತರ್ಕಬದ್ಧವಾಗಿ ಆಲೋಚನೆ ಮನೋಭಾವ ಬೆಳೆಸಿಕೊಳ್ಳಬೇಕು. ಕಲಿಕೆ ಹಾಗೂ ಕೆಲಸದಲ್ಲಿ ಕಠಿಣ ಶ್ರಮ ಮುಖ್ಯವಾಗಿರುತ್ತದೆ. ಪ್ರಸ್ತುತ ದಿನಗಳಲ್ಲಿ ಶ್ರಮದ ಕೊರತೆ ಎದ್ದು ಕಾಣುತ್ತಿದ್ದು, ಕಲಿಕೆಯಲ್ಲಿ ನಿರಾಸಕ್ತಿ ಮೂಡುತ್ತಿದೆ. ಇಂತಹ ಸಂದರ್ಭದಲ್ಲಿ ವಿವೇಕಾನಂದರ ಆತ್ಮವಿಶ್ವಾಸ ಹಾಗೂ ಏಕಾಗ್ರತೆ ತತ್ವವನ್ನು ಅಳವಡಿಸಿಕೊಳ್ಳುವ ಅಗತ್ಯತೆ ಇದೆ’ ಎಂದು ಸಲಹೆ ನೀಡಿದರು.  
 
ಸ್ವಾಮಿ ವಿವೇಕಾನಂದರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ವಾಣಿಗಳು ಸಿಡಿಲು ಬಡಿದಂತೆ ಇದ್ದು, ಇಂದಿನ ದಿನಗಳಲ್ಲಿ ವಾಣಿಗಳನ್ನು ಸಾಣೆ ಹಿಡಿಯುವ ಕಾರ್ಯ ಆಗಬೇಕು. ಆಗ ಮಾತ್ರ ನವಭಾರತ ನಿರ್ಮಾಣ ಹಾದಿ ಸುಗಮವಾಗಲು ಸಾಧ್ಯವಾಗುತ್ತದೆ’ ಎಂದರು.
 
ಶಾಸಕ ಬಿ.ವೈ.ರಾಘವೇಂದ್ರ ಮಾತನಾಡಿ, ‘ಇಂದು ಶಿಕ್ಷಣದ ಜತೆಗೆ ಜೀವನ ಕೌಶಲಗಳ ಬಗ್ಗೆ ತರಬೇತಿ ನಿಡುವುದು ಅವಶ್ಯಕವಾಗಿದೆ. ವಿದ್ಯಾರ್ಥಿ
ಗಳು ವಿವೇಕಾನಂದರ ಕೆಲವು ವಾಣಿಗಳನ್ನು ಅಳವಡಿಸಿಕೊಂಡರೆ ಮಾನಸಿಕ ಹಾಗೂ ಬೌದ್ಧಿಕವಾಗಿ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಕಠಿಣ ಶ್ರಮ ಹಾಗೂ ಆತ್ಮವಿಶ್ವಾಸ ಹೊಂದಿದಾಗ ಜೀವನದಲ್ಲಿ ಸಾಧನೆ ಮಾಡಬಹುದು’ ಎಂದು ಸಲಹೆ ನೀಡಿದರು. 
 
ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಖಜಾಂಚಿ ಬಿ.ವೈ. ವಿಜಯೇಂದ್ರ, ಸಮನ್ವಯ ಆಡಳಿತಾಧಿಕಾರಿ ಕುಬೇರಪ್ಪ, ಪ್ರಾಂಶುಪಾಲರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ವಿವೇಕಾಂಜಲಿ ಸಂಚಿಕೆ ಬಿಡುಗಡೆ ಮಾಡಲಾಯಿತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT