ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ಗೆ ಮತ ಹಾಕದಂತೆ ಮನವಿ?

Last Updated 2 ಫೆಬ್ರುವರಿ 2018, 20:00 IST
ಅಕ್ಷರ ಗಾತ್ರ

ಬೆಂಗಳೂರು: ಕೆಲವು ಮುಸ್ಲಿಂ ಧಾರ್ಮಿಕ ಮುಖಂಡರನ್ನು ಗುರುವಾರ ರಾತ್ರಿ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂದಿನ ಚುನಾವಣೆಯಲ್ಲಿ ಮುಸ್ಲಿಮರು ಜೆಡಿಎಸ್‌ಗೆ ಮತ ಹಾಕದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು ಎನ್ನಲಾಗಿದೆ.

ಜೆ.ಸಿ. ನಗರದಲ್ಲಿರುವ ಆಹಾರ ಸಚಿವ ಯು.ಟಿ. ಖಾದರ್‌ ಮನೆಗೆ ಭೋಜನಕ್ಕೆ ಹೋಗಿದ್ದ ವೇಳೆ ಉಲೆಮಾಗಳ (ಮುಸ್ಲಿಂ ಧರ್ಮಗುರುಗಳು) ಜೊತೆ ಮುಖ್ಯಮಂತ್ರಿ ಮಾತುಕತೆ ನಡೆಸಿದರು ಎಂದು ಗೊತ್ತಾಗಿದೆ.

‘ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮಧ್ಯೆ ಮುಸ್ಲಿಂ ಮತಗಳು ಒಡೆದು ಹೋಗಬಾರದೆಂಬ ಕಾರಣಕ್ಕೆ ಮುಖ್ಯಮಂತ್ರಿ ಈ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಧರ್ಮಗುರುಗಳು, ಮುಸ್ಲಿಂ ಸಮುದಾಯದ ಸಚಿವರು ತಮ್ಮ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು’ ಎಂದೂ ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಈ ಬೆಳವಣಿಗೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್‌ ಮುಖಂಡ ರಮೇಶ ಬಾಬು, ‘ಮುಸ್ಲಿಂ ಸಮುದಾಯವನ್ನು ದಾರಿ ತಪ್ಪಿಸಲು ಮುಖ್ಯಮಂತ್ರಿ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT