ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂದಗಿ ಉಪ ಚುನಾವಣೆ: ಜೆಡಿಎಸ್‌ ಅಭ್ಯರ್ಥಿಯಾಗಿ ನಾಜಿಯಾ

Last Updated 1 ಅಕ್ಟೋಬರ್ 2021, 15:15 IST
ಅಕ್ಷರ ಗಾತ್ರ

ವಿಜಯಪುರ: ಸಿಂದಗಿ ವಿಧಾನಸಭಾ ಉಪ ಚುನಾವಣೆಗೆ ನಾಜಿಯಾ ಶಕೀಲ್‌ ಅಹ್ಮದ್‌ ಅಂಗಡಿ(32) ಅವರನ್ನು ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

ಇಂಡಿ ಕ್ಷೇತ್ರದ ಮಾಜಿ ಶಾಸಕ ರವಿಕಾಂತ ಪಾಟೀಲ ಹಾಗೂ ಸಿಂದಗಿ ಕ್ಷೇತ್ರದ ಮಾಜಿ ಶಾಸಕ ದಿವಂಗತ ಎಂ.ಸಿ.ಮನಗೂಳಿ ಅವರ ಪುತ್ರ ಚನ್ನವೀರ ಮನಗೂಳಿ ಅವರು ಜೆಡಿಎಸ್‌ ಟಿಕೆಟ್‌ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಅವರನ್ನು ಹೊರತು ಪಡಿಸಿ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿರುವ ಹಾಗೂ ಚಿರಪರಿಚಿತವಲ್ಲದ ನಾಜಿಯಾ ಅವರಿಗೆ ಪಕ್ಷದ ‘ಬಿ‘ ಫಾರಂ ಅನ್ನು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ನೀಡಿರುವುದು ರಾಜಕೀಯವಾಗಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

1983–89ರಲ್ಲಿ ಸಿಂದಗಿ ಪುರಸಭೆ ಅಧ್ಯಕ್ಷರಾಗಿದ್ದ ಹಾಗೂ ಜೆ.ಎಚ್‌.ಪಟೇಲ್‌ ಅವರು ಅವಧಿಯಲ್ಲಿ ಎಂಎಸ್‌ಐಎಲ್‌ ಅಧ್ಯಕ್ಷರಾಗಿ, ರಾಮಕೃಷ್ಣ ಹೆಗಡೆ ಅವಧಿಯಲ್ಲಿ ಉಗ್ರಾಣ ನಿಗಮ ಅಧ್ಯಕ್ಷರಾಗಿದ್ದ ಜನತಾ ದಳದ ಹಿರಿಯ ಮುಖಂಡ ದಿವಂಗತ ಐ.ಬಿ.ಅಂಗಡಿ ಅವರ ಸೊಸೆ ನಾಜಿಯಾ ಅಂಗಡಿ. ಕಲಬುರ್ಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್‌ ಇನ್‌ಸ್ಪೆಕ್ಟರ್‌ ಶಕೀಲ್‌ ಅಹ್ಮದ್‌ ಅಂಗಡಿ ಅವರ ಪತ್ನಿಯಾಗಿದ್ದಾರೆ.

ಸಿಂದಗಿ ಕ್ಷೇತ್ರದಲ್ಲಿ ಇರುವ ಮುಸ್ಲಿಂ ಮತಗಳನ್ನು ಸೆಳೆಯುವ ಮೂಲಕ ಕಾಂಗ್ರೆಸ್‌ ಅಭ್ಯರ್ಥಿಗೆ ಏಟು ನೀಡುವ ಹಾಗೂ ಬಿಜೆಪಿಗೆ ಅನುಕೂಲ ಮಾಡಿಕೊಡುವ ರಾಜಕೀಯ ಲೆಕ್ಕಾಚಾರದ ಮೇರೆಗೆ ನಾಜಿಯಾ ಅವರನ್ನು ಕಣಕ್ಕಿಳಿಸಲಾಗಿದೆ ಎಂಬ ಮಾತು ಕೇಳಿಬಂದಿದೆ.

‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜೆಡಿಎಸ್‌ ಅಭ್ಯರ್ಥಿ ನಾಜಿಯಾ, ‘ಪಕ್ಷದ ಮೂಲ ಕಾರ್ಯಕರ್ತರ ಕುಟುಂಬವನ್ನು ಗುರುತಿಸಿ ಟಿಕೆಟ್‌ ನೀಡಿರುವುದು ಖುಷಿ ನೀಡಿದೆ. ನಮ್ಮ ಮಾವನವರು ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕ್ಷೇತ್ರದಲ್ಲಿ ಪಕ್ಷದ ಗೆಲುವು ನಿಶ್ಚಿತ’ ಎಂದು ಹೇಳಿದರು.

ನಾಜಿಯಾ ಎಂ.ಎ, ಬಿ.ಇಡಿ ಪದವೀಧರೆಯಾಗಿದ್ದಾರೆ. ಅ.7 ಅಥವಾ 8ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT