ವಿಜಯಪುರ: ಸಿಂದಗಿ ವಿಧಾನಸಭೆ ಉಪ ಚುನಾವಣೆ ಅಭ್ಯರ್ಥಿಯಾಗಿ ಮಾಜಿ ಶಾಸಕ ರಮೇಶ ಭೂಸನೂರ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.
2008 ಮತ್ತು 2013ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ರಮೇಶ್, 2018ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ದಿವಂಗತ ಎಂ.ಸಿ.ಮನಗೂಳಿ ವಿರುದ್ಧ ಪರಾಭವಗೊಂಡಿದ್ದರು.
ಬಿಜೆಪಿ ಟಿಕೆಟ್ ಗಾಗಿ ಪಕ್ಷದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಬಿಜೆಪಿ ರಾಜ್ಯ ಘಟಕದಿಂದ ರಮೇಶ ಭೂಸನೂರ, ಸಂಗನಗೌಡ ಪಾಟೀಲ ಮತ್ತು ಸಿದ್ದು ಬಿರಾದಾರ ಅಡಕಿ ಅವರ ಹೆಸರು ಅಂತಿಮಗೊಳಿಸಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಗೆ ಶಿಫಾರಸು ಮಾಡಲಾಗಿತ್ತು.
ರಮೇಶ್ ಭೂಸನೂರ ಅವರು ಈ ಹಿಂದೆ ಮಂಡಲ ಪ್ರಧಾನರಾಗಿ, ಕುಮಸಗಿ ಕ್ಷೇತ್ರದ ತಾಲ್ಲೂಕು ಪಂಚಾಯ್ತಿ ಸದಸ್ಯರಾಗಿ ಮತ್ತು ಆಲಮೇಲ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಪಕ್ಷೇತರ ಸದಸ್ಯರಾಗಿ ಆಯ್ಕೆಯಾಗಿದ್ದರು. 2008ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.