ಶಾಲೆ ವಿಲೀನಕ್ಕೆ ಎಸ್‌ಐಒಐ ವಿರೋಧ

7

ಶಾಲೆ ವಿಲೀನಕ್ಕೆ ಎಸ್‌ಐಒಐ ವಿರೋಧ

Published:
Updated:

ಶಿವಮೊಗ್ಗ: ಸರ್ಕಾರಿ ಶಾಲೆಗಳ ವಿಲೀನ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ ಖಂಡಿಸಿದೆ.

ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು ವಿರೋಧ ವ್ಯಕ್ತವಾದರೂ, ರಾಜ್ಯದಲ್ಲಿ ಸುಮಾರು 28,847 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ವಿಲೀನ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದು ಅಘಾತಕಾರಿ ನಡೆ ಎಂದು ಸಂಸ್ಥೆಯ ರಾಜ್ಯ ಕಾರ್ಯದರ್ಶಿ ಜೀಶಾನ್ ಅಖಿಲ್ ಸಿದ್ದಿಕಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸಂವಿಧಾನದ ಆಶಯಗಳಿಗೆ ಪೂರಕವಾಗಿ ಶಿಕ್ಷಣ ವ್ಯವಸ್ಥೆ ರೂಪುಗೊಳ್ಳಬೇಕು. ಸರ್ವರಿಗೂ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ. ಆದರೆ, ಸರ್ಕಾರ ಶಾಲೆಗಳ ಸಬಲೀಕರಣ, ಗುಣಮಟ್ಟದ ಶಿಕ್ಷಣ ನೀಡದೇ ಪಲಾಯನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2016ರಲ್ಲಿ 10 ಮಕ್ಕಳಿಗಿಂತ ಕಡಿಮೆ ದಾಖಲಾತಿ ಹೊಂದಿದ ಸುಮಾರು 2,168 ಶಾಲೆ 1 ಕಿ.ಮೀ. ವ್ಯಾಪ್ತಿ ಒಳಗಿನ ಶಾಲೆಗಳ ಜತೆ ವಿಲೀನ ಮಾಡಲಾಗಿತ್ತು. ಇದರ ಪರಿಣಾಮ ಹಲವಾವು ಖಾಸಗಿ ಶಾಲೆಗಳು ಹುಟ್ಟಿಕೊಂಡವು. ವಿಲೀನ ಮಾಡಿಕೊಂಡ ಶಾಲೆಗಳಲ್ಲಿ ಯಾವುದೇ ರೀತಿಯ ಪರಿಣಾಮ ಬೀರಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು. ಇದು ಶಿಕ್ಷಣದ ವ್ಯಾಪಾರಿಕರಣಕ್ಕೆ ದಾರಿ ಮಾಡಿಕೊಡುತ್ತದೆ. ಜಿಲ್ಲೆಯಲ್ಲೂ  938 ಶಾಲೆ ವಿಲೀನ ಆದೇಶ ಹೊರಡಿಸಲಾಗಿದೆ ಎಮದು ದೂರಿದರು.

ಪತ್ರಿಕಾಗೋಷ್ಠಿಯಲ್ಲಿ ಎಸ್ಐಒ ಜಿಲ್ಲಾ ಘಟಕದ ಅಧ್ಯಕ್ಷ ಮಹಮದ್‌ ಇಸ್ಮಾಯಿಲ್, ಕಾರ್ಯದರ್ಶಿ ಎಸ್.ಕೆ. ಸಾಲಿಕ್, ಸ್ಥಾನಿಕ ಅಧ್ಯಕ್ಷ ಅಜ್ಮತ್‌ ಉಲ್ಲಾ ಬೇಗ್, ಫಾರುಕ್ ಉಸ್ಥಿತರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !