ಶುಕ್ರವಾರ, ಜೂನ್ 18, 2021
21 °C

ಶಿವಾನಂದ ಬಿರಾದಾರ ಸಿಐಡಿ ಕಸ್ಟಡಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಭೀಮಾ ತೀರದ ರೌಡಿ ಧರ್ಮರಾಜ ಚಡಚಣನ ಪೊಲೀಸ್‌ ಎನ್‌ಕೌಂಟರ್ ಹಾಗೂ ಗಂಗಾಧರ ಚಡಚಣನ ನಿಗೂಢ ಕೊಲೆಯ ಪ್ರತ್ಯಕ್ಷದರ್ಶಿ ಶಿವಾನಂದ ಬಿರಾದಾರನನ್ನು ಸಿಐಡಿ ಪೊಲೀಸರು ನೆರೆಯ ಮಹಾರಾಷ್ಟ್ರದಲ್ಲಿ ಬಂಧಿಸಿದ್ದಾರೆ.

ಗಂಗಾಧರ ಚಡಚಣನ ನಿಗೂಢ ಕೊಲೆ ಪ್ರಕರಣದಲ್ಲೂ ಆರೋಪಿಯಾಗಿರುವ ಶಿವಾನಂದನನ್ನು ಬಂಧಿಸಿದ ಸಿಐಡಿ ಅಧಿಕಾರಿಗಳು, ಶನಿವಾರ ಮುಸ್ಸಂಜೆ ಇಂಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

ನ್ಯಾಯಾಧೀಶ ಅರವಿಂದ ಹಾಗರಗಿ ಆರೋಪಿಯ ಹೇಳಿಕೆ ಪಡೆದ ಬಳಿಕ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡಬೇಕು ಎಂದು ಸಿಐಡಿ ಪೊಲೀಸರ ಮನವಿಗೆ ಸ್ಪಂದಿಸಿ, ಇದೇ 24ರವರೆಗೆ ಸಿಐಡಿ ಕಸ್ಟಡಿಗೆ ಆದೇಶ ನೀಡಿದರು ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

‘ಶಿವಾನಂದ ಬಿರಾದಾರ ಚಡಚಣ ಸಹೋದರರ ಹತ್ಯೆಯ ಪ್ರತ್ಯಕ್ಷದರ್ಶಿ. ಇಡೀ ಪ್ರಕರಣ ಈತನ ತನಿಖೆ, ಹೇಳಿಕೆ ಮೇಲೆ ನಿರ್ಧಾರವಾಗಲಿದೆ. ಈ ನಿಟ್ಟಿನಲ್ಲಿ ಸೂಕ್ಷ್ಮವಾಗಿ ಸಮಗ್ರ ಮಾಹಿತಿ ಸಂಗ್ರಹಿಸುವ ಜತೆ, ಸಾಕ್ಷಿಯನ್ನಾಗಿಸಲು’ ಸಿಐಡಿ ಅಧಿಕಾರಿಗಳ ತಂಡ ಚಿಂತಿಸುತ್ತಿದೆ ಎಂಬುದು ತಿಳಿದು ಬಂದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು