‘ಧೂಮಪಾನ– ಕೋವಿಡ್ಗೆ ಆಹ್ವಾನ ನೀಡಿದಂತೆ’

ಬೆಂಗಳೂರು: 'ಧೂಮಪಾನದಿಂದ ಹಾಗೂ ಪರೋಕ್ಷ ಧೂಮಪಾನದಿಂದ ದೇಹದ ರೋಗನಿರೋಧಕ ಶಕ್ತಿಯು ಕುಂದುತ್ತದೆ. ಇದರಿಂದ ಕೋವಿಡ್-19 ನಂತಹ ಸೋಂಕು ತಗಲುವ ಸಾಧ್ಯತೆಗಳು ಹೆಚ್ಚು’ ಎಂದು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಎಚ್ಚರಿಸಿದರು.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ, ತಂಬಾಕು ಉತ್ಪನ್ನ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ 2003 ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಕುರಿತು ಬಿಬಿಎಂಪಿಯು ಸೋಮವಾರ ಏರ್ಪಡಿಸಿದ್ದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
‘ನಗರದಲ್ಲಿ ಸದ್ಯ ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಸ್ವಲ್ಪವೇ ನಿರ್ಲಕ್ಷ್ಯ ತೋರಿದರೂ ಸೋಂಕಿನ ಪ್ರಮಾಣ ಮತ್ತೆ ಹೆಚ್ಚಲಿದೆ. ಆದ್ದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.