15ರಿಂದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲ್‌ ಬ್ಯಾಡ್ಮಿಂಟನ್‌ ಆರಂಭ

7

15ರಿಂದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲ್‌ ಬ್ಯಾಡ್ಮಿಂಟನ್‌ ಆರಂಭ

Published:
Updated:

ಶಿವಮೊಗ್ಗ: ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಅ. 15ರಿಂದ 16ರವರೆಗೆ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲ್‌ ಬ್ಯಾಡ್ಮಿಂಟನ್ ಪಂದ್ಯಗಳು ನಡೆಯಲಿವೆ.

ಪದವಿಪೂರ್ವ ಶಿಕ್ಷಣ ಇಲಾಖೆ, ಬಿಜಿಎಸ್ ಗುರುಕುಲ ಸ್ವತಂತ್ರ ಪದವಿಪೂರ್ವ ಕಾಲೇಜು, ಆದಿ ಚುಂಚನಗಿರಿ ಸ್ವತಂತ್ರ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಆಯೋಜಿಸಲಾಗಿದೆ ಎಂದು ಎಂದು ಕಾಲೇಜಿನ ಪ್ರಾಚಾರ್ಯ ಎಸ್.ವಿ. ಗುರುರಾಜ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

64 ತಂಡಗಳು, 600ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. 8 ಅಂಕಣ ಸಿದ್ಧಪಡಿಸಲಾಗಿದೆ. 20 ತೀರ್ಪುಗಾರರು ಇರುತ್ತಾರೆ. ಎಲ್ಲರಿಗೂ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.

15 ರಂದು ಬೆಳಿಗ್ಗೆ 9.30ಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಕ್ರೀಡಾಕೂಟ ಉದ್ಘಾಟಿಸುವರು. ಜಿಲ್ಲಾಧಿಕಾರಿ ಕೆ.ಎ. ದಯಾನಂದ್, ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್, ಪಿ.ಆರ್. ಗಾಯತ್ರಿ ರೆಡ್ಡಿ ಭಾಗವಹಿಸುವರು. 16ರ ಸಂಜೆ 3.30ಕ್ಕೆ ನಡೆಯುವ ಸಮಾರೋಪದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ, ಹೆಚ್ಚುವರಿ ಜಿಲ್ಲಾಧಿಕಾರಿ ಜಿ. ಅನುರಾಧ ಉಪಸ್ಥಿತರಿರುವರು ಎಂದು ವಿವರ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಹಮದ್ ಇಮ್ತಿಯಾಜ್, ಜಿಲ್ಲಾ ಕ್ರೀಡಾ ಸಂಯೋಜಕ ಬಿ.ಸಿ. ನಾಗರಾಜ್, ದೈಹಿಕ ಶಿಕ್ಷಣ ನಿರ್ದೇಶಕ ರಾ.ತಿಮ್ಮೇನಹಳ್ಳಿ, ಚಂದ್ರಪ್ಪ ಉಪಸ್ಥಿತರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !