ಸೋಮವಾರ, ಜೂನ್ 14, 2021
20 °C
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ನಡುವೆ ಪೈಪೋಟಿ; ಎಂ.ಬಿ.ಪಾಟೀಲ

‘ಶ್ರೀರಾಮುಲು ಹೇಳಿಕೆಗೆ ಬೆಲೆಯಿಲ್ಲ; ಅನ್ಯಾಯ ಆಗಲು ಬಿಡಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ.ಶ್ರೀರಾಮುಲು ನೀಡಿರುವ ಹೇಳಿಕೆಗೆ ಯಾವುದೇ ಬೆಲೆಯಿಲ್ಲ’ ಎಂದು ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಹೇಳಿದರು.

‘ಈ ಹಿಂದೆ ಶಾಸಕ ಉಮೇಶ ಕತ್ತಿ ಸಹ ಇದೇ ರೀತಿಯ ಹೇಳಿಕೆ ನೀಡಿದ್ದರು. ವೈಯಕ್ತಿಕ ಹೇಳಿಕೆ ಬದಲು ತಮ್ಮ ಪಕ್ಷದ ನಿಲುವು ಏನು ಎಂಬುದನ್ನು ಬಹಿರಂಗಪಡಿಸಲು ಬಿಜೆಪಿ ಶಾಸಕರು ಮುಂದಾಗಲಿ’ ಎಂದು ಪಾಟೀಲ ಶುಕ್ರವಾರ ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.

‘ಸಮಗ್ರ ಕರ್ನಾಟಕ ನಮ್ಮೆಲ್ಲರ ಆಶಯ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿಲ್ಲ. ಆಗಲೂ ನಾವೂ ಎಂದೆಂದಿಗೂ ಅವಕಾಶ ನೀಡಲ್ಲ’ ಎಂದು ಇದೇ ಸಂದರ್ಭ ಪುನರುಚ್ಚರಿಸಿದರು.

‘ಬುದ್ಧಿಜೀವಿಗಳು, ಜಾತ್ಯತೀತರಿಗೆ ಗುಂಡಿಕ್ಕಲು ಹೇಳುತ್ತಿದ್ದೆ’ ಎಂದು ಯತ್ನಾಳ ನೀಡಿರುವ ಹೇಳಿಕೆಗೆ ಪತ್ರಕರ್ತರು ಪ್ರತಿಕ್ರಿಯೆ ಕೇಳಿದ್ದಕ್ಕೆ ‘ಇದೊಂದು ಎಂಡ್‌ಲೆಸ್‌ ಟಾಪಿಕ್‌. ಸಮಾಜದ ಎಲ್ಲಾ ರಂಗದಲ್ಲೂ ಒಳ್ಳೆಯವರು, ಕೆಟ್ಟವರು ಇದ್ದಾರೆ. ಯತ್ನಾಳ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಜತೆ ಮುಂಚೂಣಿಗಾಗಿ ಪೈಪೋಟಿ ನಡೆಸುತ್ತಿದ್ದಾರೆ’ ಎಂದು ಎಂ.ಬಿ.ಪಾಟೀಲ ವ್ಯಂಗ್ಯವಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು