13ರಂದು ಶ್ರೀನಿವಾಸ ಕಲ್ಯಾಣೋತ್ಸವ

ಶನಿವಾರ, ಏಪ್ರಿಲ್ 20, 2019
27 °C
ಅಮೃತ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ದಶಮಾನೋತ್ಸವ

13ರಂದು ಶ್ರೀನಿವಾಸ ಕಲ್ಯಾಣೋತ್ಸವ

Published:
Updated:

ರಿಪ್ಪನ್‌ಪೇಟೆ: ಅಮೃತ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ದಶಮಾನೋತ್ಸವದ ಅಂಗವಾಗಿ ಬೆಂಗಳೂರಿನ ಶ್ರೀವಾರಿ ಫೌಂಡೇಶನ್ ಸಹಯೋಗದಲ್ಲಿ ಇದೇ 13ರಂದು ಅಮೃತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ' ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಚ್.ಎನ್.ಶಂಕರಮೂರ್ತಿ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಂಬುಜ ಮಠದ ಪೀಠಾಧಿಕಾರಿ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಅವರು ಧಾರ್ಮಿಕ ಸಭೆಯ ಸಾನಿಧ್ಯ ವಹಿಸಲಿದ್ದು, ನಿಟ್ಟೂರು ನಾರಾಯಣಗುರು ಮಠದ ಪೀಠಾಧಿಕಾರಿ ರೇಣುಕಾನಂದ ಸ್ವಾಮೀಜಿ, ಮಳಲಿ ಮಠದ ಪೀಠಾಧಿಕಾರಿ ಡಾ. ಗುರು ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಲಿದ್ದಾರೆ’ ಎಂದರು.

ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿಯಮಿತದ ಅಧ್ಯಕ್ಷ ಬಿ.ಎಚ್. ಕೃಷ್ಣರೆಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಮೃತ ವಿವಿಧೋದ್ದೇಶ ಸೌಹಾರ್ದ ಸಹಕಾರ ನಿಯಮಿತದ ಅಧ್ಯಕ್ಷ ಎಚ್.ಎನ್. ಶಂಕರಮೂರ್ತಿ ಅಧ್ಯಕ್ಷತೆ ವಹಿಸುವರು.

ಮಂಗಳೂರು ಕ್ಯಾಂಪ್ಕೊ ಅಧ್ಯಕ್ಷ ಸತೀಶ್‌ ಚಂದ್ರ ಸಹಕಾರ ನಡೆದು ಬಂದ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ನಿಯಮಿತದ ನಿರ್ದೇಶಕ ಪ್ರಸನ್ನಕುಮಾರ್, ಮ್ಯಾಮ್ಕೋಸ್ ಅಧ್ಯಕ್ಷ ವೈ.ಎಸ್. ಸುಬ್ರಹ್ಮಣ್ಯ, ಕೊಡಚಾದ್ರಿ ಅಡಿಕೆ ಮಾರಾಟ ಸಹಕಾರ ಸಂಘದ ಅಧ್ಯಕ್ಷ ನಿವಣೆ ಸೀತಾರಾಮಭಟ್, ಹಿರಿಯ ಲೆಕ್ಕ ಪರಿಶೋಧಕ ಜಿ.ವಿ. ರವೀಂದ್ರ, ಶ್ರೀನಿವಾಸ ಕಲ್ಯಾಣ ಸಮಿತಿಯ ಅಧ್ಯಕ್ಷ ಎಚ್.ಎಂ. ವೀರಭದ್ರಪ್ಪ ಹಾಜರಿರುವರು.

ಗೋಷ್ಠಿಯಲ್ಲಿ ಸಹಕಾರಿ ಉಪಾಧ್ಯಕ್ಷ ಜೆ.ಪಿ.ಕಿರಣ್, ಎಚ್.ಎಂ. ರಾಘವೇಂದ್ರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !