ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಮಟ್ಟದ ಅಥ್ಲೆಟಿಕ್ಸ್‌ಗೆ ಚಾಲನೆ

Last Updated 23 ಅಕ್ಟೋಬರ್ 2019, 11:39 IST
ಅಕ್ಷರ ಗಾತ್ರ

ಶಿವಮೊಗ್ಗ: ‘ವಿದ್ಯಾರ್ಥಿಗಳಿಗೆ ಶಿಕ್ಷಣ ಎಷ್ಟು ಮುಖ್ಯವೊ, ಕ್ರೀಡೆಯೂ ಅಷ್ಟೆ ಮುಖ್ಯ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಹೇಳಿದರು.

ನೆಹರೂ ಕ್ರೀಡಾಂಗಣದಲ್ಲಿ ಡಿವಿಸ್‌ ಸಂಸ್ಥೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ಗೆ ಚಾಲನೆ ನೀಡಿಅವರು ಮಾತನಾಡಿದರು.

‘ಇತ್ತೀಚಿನ ದಿನಗಳಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು ಕೇವಲ ಶಿಕ್ಷಣಕ್ಕೆ ಮಾತ್ರ ಮಹತ್ವ ನೀಡುತ್ತಿದ್ದಾರೆ. ಆದರೆ, ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಲುಕ್ರೀಡೆಯೂ ಮುಖ್ಯ’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜಿ. ಅನುರಾಧ ಮಾತನಾಡಿ, ‘ವಿದ್ಯಾರ್ಥಿಗಳುಶೈಕ್ಷಣಿಕ ಚಟುವಟಿಕೆ ಜತೆಗೆ ಕ್ರೀಡೆಗಳಲ್ಲೂ ಭಾಗವಹಿಸುವುದರಿಂದ ಮನಸ್ಸು ಮತ್ತು ದೇಹಕ್ಕೆ ಚೈತನ್ಯ ದೊರೆಯುತ್ತದೆ. ಡಿವಿಎಸ್ ಸಂಸ್ಥೆ ರಾಜ್ಯ ಮಟ್ಟದ ಕ್ರೀಡಾಕೂಟ ಏರ್ಪಡಿಸುವ ಮೂಲಕ ಕ್ರೀಡಾಪಟುಗಳಿಗೆ ಉತ್ತೇಜನ ನೀಡಿದೆ. ಕ್ರೀಡಾಪಟುಗಳು ಸೋಲು, ಗೆಲುವಿನ ಬಗ್ಗೆ ಚಿಂತಿಸದೆ ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಶಿವಮೊಗ್ಗದಲ್ಲಿ ಪಿಯು ವಿದ್ಯಾರ್ಥಿಗಳಿಗೆರಾಜ್ಯಮಟ್ಟದ ಕ್ರೀಡಾಕೂಟ ನಡೆಯುತ್ತಿರುವುದು ಸ್ವಾಗತಾರ್ಹ. ಈ ಅವಕಾಶವನ್ನು ಪ್ರತಿಯೊಬ್ಬ ಕ್ರೀಡಾಪಟುವು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಇಮ್ತಿಯಾಜ್ ಖಾನ್,ಡಿವಿಸ್‌ ಸಂಸ್ಥೆಯ ಅಧ್ಯಕ್ಷ ಬಸಪ್ಪಗೌಡ, ಕಾರ್ಯದರ್ಶಿ ಎಸ್. ರಾಜಶೇಖರ್, ಪ್ರೊ.ವಿ. ದೇವೆಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT