ಭಾನುವಾರ, ಫೆಬ್ರವರಿ 23, 2020
19 °C

ಕ್ಯಾಂಪ್‌ಗೆ ತೆರಳಿದ್ದ ಪೆಸಿಟ್‌ ವಿದ್ಯಾರ್ಥಿನಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ತಾಲ್ಲೂಕಿನ ಬೀರನಕೆರೆ ಬಳಿ ಪೆಸಿಟ್‌ ಡಿಪ್ಲೊಮಾ ಕಾಲೇಜು ಹಮ್ಮಿಕೊಂಡಿದ್ದ ಶಿಬಿರಕ್ಕೆ ತೆರಳಿದ್ದ ವಿದ್ಯಾರ್ಥಿನಿ ಶನಿವಾರ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಅಂತಿಮ ವರ್ಷದ ಸಿವಿಲ್‌ ವಿಭಾಗದ ಪರಿಣಿತಾ (20) ಮೃತ ವಿದ್ಯಾರ್ಥಿನಿ. ಉಪನ್ಯಾಸಕಿ ರಕ್ಷಿತಾ ಗಾಯಗೊಂಡಿದ್ದಾರೆ. ಪರಿಣಿತಾ ಅವರದು ಭದ್ರಾವತಿ.

ಡಿ.4ರಿಂದ ಬೀರನಕೆರೆಯಲ್ಲಿ 22 ವಿದ್ಯಾರ್ಥಿಗಳ ಜತೆ ವಾಸ್ತವ್ಯ ಹೂಡಿದ್ದರು. ಶನಿವಾರ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಹಿಂದಿನಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎಂದು ಕಾಲೇಜು ಆಡಳಿತ ಮಂಡಳಿ ಹೇಳಿಕೆ ನೀಡಿದೆ. ಮೆಗ್ಗಾನ್‌ ಆಸ್ಪತ್ರೆಯ ಶವಾಗಾರದ ಮುಂದೆ ಪೋಷಕರ ಆಕ್ರೋಂದನ ಮುಗಿಲು ಮುಟ್ಟಿತ್ತು. ಪೋಷಕರು ಹಾಗೂ ಕಾಲೇಜು ಆಡಳಿತ ಮಂಡಳಿ ನಡುವೆ ವಾಗ್ವಾದ ನಡೆಯಿತು. ನಂತರ ಪೊಲೀಸರು ಮಧ್ಯ ಪ್ರವೇಶಿಸಿ, ಸಂಧಾನ ನಡೆಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು