ಅಪರಾಧ ತಡೆಯುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯ

7

ಅಪರಾಧ ತಡೆಯುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯ

Published:
Updated:
Deccan Herald

ಚನ್ನಪಟ್ಟಣ: ಸಮಾಜ ಸುಧಾರಣೆ ಹಾಗೂ ಅಪರಾಧ ಪ್ರಕರಣಗಳನ್ನು ತಡೆಯುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯ ಎಂದು ಅಕ್ಕೂರು ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಮರಿಸ್ವಾಮಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಎಲೆತೋಟದಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಅಕ್ಕೂರು ಪೊಲೀಸ್ ಠಾಣೆ ಆಶ್ರಯದಲ್ಲಿ ಶನಿವಾರ ಆಯೋಜಿಲಾಗಿದ್ದ ಅಪರಾಧ ತಡೆ ಮಾಸಚರಣೆ ಜಾಥಾದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ನಡೆಯುವ ಪ್ರತಿಯೊಂದು ಅಪರಾಧ ಪ್ರಕರಣಗಳನ್ನು ಪೊಲೀಸರೊಬ್ಬರಿಂದಲೇ ನಿಯಂತ್ರಣ ಮಾಡಲು ಸಾಧ್ಯವಿಲ್ಲ. ಪೊಲೀಸರ ಜೊತೆ ವಿದ್ಯಾರ್ಥಿಗಳು, ಸಾರ್ವಜನಿಕರು ಕೈ ಜೋಡಿಸಿದಾಗ ಕೆಲವು ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದರು.

ವಿದ್ಯಾರ್ಥಿಗಳು ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. ರಸ್ತೆ ದಾಟುವಾಗ, ಬರುವಾಗ, ಬಸ್ ಹತ್ತುವಾಗ ಮೈಯೆಲ್ಲಾ ಕಣ್ಣಾಗಿರಬೇಕು. ಒಂದು ಕ್ಷಣದಲ್ಲಿ ಆಗುವ ಅಪಘಾತಗಳು ಜೀವನವನ್ನೇ ಬಲಿ ತೆಗೆದುಕೊಳ್ಳುತ್ತವೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಜೊತೆಗೆ ಸಮಾಜಸೇವೆ, ಮಾನವೀಯತೆ, ಶಿಸ್ತು, ಸಂಯಮ ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಪಿಡಿಒ ಶಂಕರ್, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಕ್ಕೂರು ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗ ಹಾಜರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !