ಶುಕ್ರವಾರ, ಅಕ್ಟೋಬರ್ 30, 2020
27 °C
ಮಸೂದೆ ಹಿಂಪಡೆಯಲು ಎಸ್‍ಯುಸಿಐ ಆಗ್ರಹ

‘ರೈತರನ್ನು ಗುತ್ತಿಗೆ ಕೃಷಿಯತ್ತ ದೂಡುವ ಹುನ್ನಾರ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಗತ್ಯ ವಸ್ತುಗಳ ತಿದ್ದುಪಡಿ ಮಸೂದೆ, ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಮಸೂದೆಗಳು ರೈತ ವಿರೋಧಿಯಾಗಿದ್ದು, ಅವುಗಳನ್ನು ಹಿಂಪಡೆಯಬೇಕು ಎಂದು ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‍ಯುಸಿಐ)  ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

'ಈ ಮಸೂದೆಗಳ ಮೂಲಕ ಆಹಾರ ಸರಪಳಿಯನ್ನು ಕಾರ್ಪೊರೇಟ್ ಸಂಸ್ಥೆಗಳ ವಶಕ್ಕೆ ಒಪ್ಪಿಸಲು ಸರ್ಕಾರ ಮುಂದಾಗಿದೆ. ರೈತರನ್ನು ಗುತ್ತಿಗೆ ಕೃಷಿಯತ್ತ ದೂಡುವ ಹುನ್ನಾರವಿದು' ಎಂದು ಎಸ್‍ಯುಸಿಐ ರಾಜ್ಯ ಕಾರ್ಯದರ್ಶಿ ಕೆ.ಉಮಾ ದೂರಿದ್ದಾರೆ.

'ಈ ಮಸೂದೆಗಳನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇದೇ 25ರಂದು 'ಅಖಿಲ ಭಾರತ ಗ್ರಾಮೀಣ ಬಂದ್' ಆಚರಿಸಲಿದ್ದು, ಇದಕ್ಕೆ ಎಸ್‌ಯುಸಿಐ ಬೆಂಬಲ ನೀಡಲಿದೆ. ಈ ಅಪಾಯಕಾರಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಚಳವಳಿ ನಡೆಸಲಾಗುವುದು' ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.