‘ಮಕ್ಕಳ ಸಾಹಿತ್ಯ ಲೋಕಕ್ಕೆ ಅಪಾರ ಕಾಣಿಕೆ ನೀಡಿದ ನಾಡಿಗ್’

7

‘ಮಕ್ಕಳ ಸಾಹಿತ್ಯ ಲೋಕಕ್ಕೆ ಅಪಾರ ಕಾಣಿಕೆ ನೀಡಿದ ನಾಡಿಗ್’

Published:
Updated:
Deccan Herald

ಚನ್ನಪಟ್ಟಣ: ಕನ್ನಡ ಸಾರಸ್ವತ ಲೋಕದ ಧ್ರುವತಾರೆಯಂತಿದ್ದ ಹಿರಿಯ ಕವಿ ಸುಮತೀಂದ್ರ ನಾಡಿಗ್ ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ಭರಿಸಲಾಗದ ನಷ್ಟವಾಗಿದೆ ಎಂದು ಪ್ರಾಂಶುಪಾಲ ಎ.ಎಲ್.ಶೇಖರ್ ವಿಷಾದಿಸಿದರು.

ಪಟ್ಟಣದ ಚನ್ನಾಂಬಿಕ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಸುಮತೀಂದ್ರ ನಾಡಿಗ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ನಾಡಿಗ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಮಕ್ಕಳ ಸಾಹಿತ್ಯ ಲೋಕಕ್ಕೆ ಅಪಾರ ಕಾಣಿಕೆ ನೀಡಿರುವ ಶ್ರೀಯುತರು ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿದ್ದಾರೆ. ಅವರ ಬದುಕು, ಬರಹ, ಸಾಧನೆಗಳು ಯುವಜನತೆಗೆ ಅನುಕರಣೀಯ ಎಂದರು.

ನಾಡಿಗ್ ಅವರ ಸಾಹಿತ್ಯವನ್ನು ಅಭ್ಯಾಸ ಮಾಡುವುದರ ಮೂಲಕ ಅವರ ಸಾಹಿತ್ಯದ ವಿಚಾರಗಳನ್ನು ಅರಿತುಕೊಳ್ಳಬೇಕು ಎಂದರು.

ಹಿರಿಯ ಜನಪದ ಗಾಯಕ ಚೌ.ಪು. ಸ್ವಾಮಿ ಮಾತನಾಡಿ, ನಾಡಿಗ್ ಅವರು ಕಥೆ, ಕವನ, ಮಕ್ಕಳ ಸಾಹಿತ್ಯ, ವಿಮರ್ಶೆ, ಅನುವಾದ ಮುಂತಾದ ಸಾಹಿತ್ಯ ಪ್ರಕಾರಗಳಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದಾರೆ ಎಂದರು.

ಶ್ರೀಯುತರ ಸಾಹಿತ್ಯ ಸಾಧನೆಗಾಗಿ ರಾಜ್ಯೋತ್ಸವ, ಜಿ.ಪಿ. ರಾಜರತ್ನಂ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರ ಇತ್ಯಾದಿ ದೊರೆತಿವೆ. ಈ ಪ್ರಶಸ್ತಿಗಳು ಅವರ ಸಾಹಿತ್ಯ ಶ್ರೀಮಂತಿಕೆಗೆ ಮೈಲುಗಲ್ಲು ಎಂದರು.

ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ಕಾರ್ಯದರ್ಶಿ ವಿಜಯ್ ರಾಂಪುರ ಮಾತನಾಡಿದರು. ಉಪನ್ಯಾಸಕರಾದ ಪೂಜಾ, ನಿವೇದಿತಾ, ಶಾಹಿಸ್ತಾ, ಸೀಮಾ, ಜ್ಯೋತಿ, ವಿದ್ಯಾರ್ಥಿಗಳಾದ ಮಹೇಶ್, ಶ್ರುತಿ, ಅರುಣ್, ಹರೀಶ್, ಸಂಗೀತ, ನಿಸರ್ಗ ಭಾಗವಹಿಸಿ ನಾಡಿಗ್ ಅವರಿಗೆ ಸಂತಾಪ ಸೂಚಿಸಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !