ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸ ನಿರ್ವಹಣೆ ಸಂಸ್ಥೆ ಸ್ಥಾಪನೆಗೆ ಅನುಮೋದನೆ

Last Updated 6 ಮಾರ್ಚ್ 2021, 20:57 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯೂ ಸೇರಿದಂತೆ ಸಂಪೂರ್ಣ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಸ ಸಂಗ್ರಹಣೆ, ಸಾಗಣೆ ಮತ್ತು ವಿಲೇವಾರಿಗಾಗಿ ‘ಬೆಂಗಳೂರು ಕಸ ನಿರ್ವಹಣೆ ನಿಯಮಿತ’ ಸಂಸ್ಥೆಯನ್ನು ಸ್ಥಾಪಿಸಲು ನಗರಾಭಿವೃದ್ಧಿ ಇಲಾಖೆ ಅನುಮೋದನೆ ನೀಡಿದೆ.

ಕಂಪನಿಗಳ ಕಾಯ್ದೆಯಡಿ ಸ್ಥಾಪಿಸಲಾಗುವ ಈ ಸಂಸ್ಥೆಗೆ ನಗರಾಭೀವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷ ಹಾಗೂ ಬಿಬಿಎಂಪಿ ಆಯುಕ್ತರು ಸಹ ಅಧ್ಯಕರಾಗಲಿದ್ದಾರೆ. ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ಆಡಳಿತ ಮಂಡಳಿ ನೇಮಿಸಲಿದೆ. ಬಿಬಿಎಂಪಿಯಿಂದ ವಿಶೇಷ ಆಯುಕ್ತರು (ಕಸ ನಿರ್ವಹಣೆ) ಮತ್ತು ಜಂಟಿ ಆಯುಕ್ತ (ಕಸ ನಿರ್ವಹಣೆ) ಅವರು ಪದನಿಮಿತ್ತ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ರಾಜ್ಯ ಸರ್ಕಾರವುಕಸ ನಿರ್ವಹಣೆ ತಜ್ಞರಿಬ್ಬರನ್ನು ಸಂಸ್ಥೆಯ ನಿರ್ದೇಶಕರಾಗಿ ನಾಮನಿರ್ದೇಶನ ಮಾಡಲಿದೆ. ಅರಣ್ಯ ಪರಿಸರ ಮತ್ತು ಜೀವಿವಿಜ್ಞಾನ ಇಲಾಖೆಯ ಕಾರ್ಯದರ್ಶಿ, ಆರ್ಥಿಕ ಇಲಾಖೆಯ ಕಾರ್ಯದರ್ಶಿ (ವೆಚ್ಚ) ಮತ್ತು ಬೆಂಗಳೂರಿನ ಪ್ರಾದೇಶಿಕ ಆಯುಕ್ತರನ್ನು ಸರ್ಕಾರದ ಪರವಾಗಿ ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗುತ್ತದೆ.

ವೈದ್ಯಕೀಯ ತ್ಯಾಜ್ಯ, ಸಾರ್ವಜನಿಕ ಶೌಚಾಲಯಗಳಲ್ಲಿ ತ್ಯಾಜ್ಯವನ್ನು ಹೊರತುಪಡಿಸಿ ಉಳಿದೆಲ್ಲ ಬಗೆಯ ಕಸ ಸಂಗ್ರಹ, ಸಾಗಣೆ ಮತ್ತು ವಿಲೇವಾರಿ ಈ ಸಂಸ್ಥೆಯ ಹೊಣೆ. ಕಸದಿಂದ ಗೊಬ್ಬರ ತಯಾರಿಸುವುದು, ಕಸದ ಮರುಬಳಕೆಯ ಬಗ್ಗೆಯೂ ಸಂಸ್ಥೆ ಕ್ರಮ ಕೈಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT