ಕೇಂದ್ರ ವಿರುದ್ಧ ಸಾಂಕೇತಿಕ ಪ್ರತಿಭಟನೆ

7

ಕೇಂದ್ರ ವಿರುದ್ಧ ಸಾಂಕೇತಿಕ ಪ್ರತಿಭಟನೆ

Published:
Updated:
Prajavani

ಕನಕಪುರ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ರಾಷ್ಟ್ರವ್ಯಾಪ್ತಿ ಜ.8ಮತ್ತು 9ರಂದು ನಡೆಯುತ್ತಿರುವ ಮುಷ್ಕರದ ಹಿನ್ನೆಲೆಯಲ್ಲಿ ಭಾರತೀಯ ಜೀವ ವಿಮಾ ನಿಗಮ ಕನಕಪುರ ಶಾಖೆ ಸಿಬ್ಬಂದಿ ಸೋಮವಾರ ಕಚೇರಿ ಮುಂಭಾಗದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘದ ಅಧ್ಯಕ್ಷ ಜಿ.ಮಹದೇವರಾವ್‌ ಮಾತನಾಡಿ, ಕೇಂದ್ರ ಸರ್ಕಾರ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿ ಮಾಡಿಲ್ಲ. ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿವೆ. ಇಂತಹ ಸಂದರ್ಭದಲ್ಲಿ ಕನಿಷ್ಠ ವೇತನವಿಲ್ಲದ 3 ಮತ್ತು 4ನೇ ವರ್ಗದ ಸಿಬ್ಬಂದಿ ಕುಟುಂಬ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ ಎಂದು ದೂರಿದರು.

ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡಕೂಡದು. ನೂತನ ಪಿಂಚಣಿ ಯೋಜನೆ ರದ್ದುಗೊಳಿಸಬೇಕು. ಖಾಸಗಿ ಮತ್ತು ಸರ್ಕಾರಿ ಉದ್ಯೋಗದಲ್ಲಿನ 3 ಮತ್ತು 4ನೇ ದರ್ಜೆಯ ನೌಕರರಿಗೆ ಕನಿಷ್ಠ ₹18 ಸಾವಿರ ವೇತನ ನೀಡಬೇಕೆಂದು ಆಗ್ರಹಿಸಿದರು.

ಸಂಘದ ಕಾರ್ಯದರ್ಶಿ ಸಿ.ಚಂದ್ರು ಮಾತನಾಡಿದರು. ಕಚೇರಿ ಎಲ್ಲಾ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !