ತೀರ್ಥಹಳ್ಳಿ: ತಾಲ್ಲೂಕಿನ ಕನ್ನಂಗಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರು ವಿದ್ಯಾರ್ಥಿಗಳಿಂದ ಮಸಾಜ್ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪೋಷಕರು ದೂರು ನೀಡಿದ್ದಾರೆ.

ಮಧ್ಯಾಹ್ನದ ಭೋಜನದ ನಂತರ ಬಾಲಕ, ಬಾಲಕಿಯರನ್ನು ಕೊಠಡಿಗೆ ಕರೆಯಿಸಿಕೊಂಡು ಶರ್ಟ್ ಬಿಚ್ಚಿ ಕೂರುತ್ತಿದ್ದ ಶಿಕ್ಷಕ ಕೈ, ಕಾಲಿಗೆ ಮಸಾಜ್ ಮಾಡಿಸಿಕೊಳ್ಳುತ್ತಿದ್ದ ಎಂದು ವಿದ್ಯಾರ್ಥಿಗಳು ಪೋಷಕರ ಬಳಿ ದೂರಿದ್ದರು.

ಅರೆನಲ್ಲಿ ಶಾಲೆ ಮುಚ್ಚಿದ ಬಳಿಕ 2 ವರ್ಷದ ಹಿಂದೆ ಕನ್ನಂಗಿ ಶಾಲೆಯಲ್ಲಿ ನಿಯೋಜನೆಗೊಂಡ ಶಿಕ್ಷಕ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುತ್ತಿರಲಿಲ್ಲ ಎಂದೂ ಪೋಷಕರು ಆರೋಪಿಸಿದ್ದಾರೆ.

ಮಕ್ಕಳು ಶಿಕ್ಷಕರ ವರ್ತನೆ ಬಗ್ಗೆ ದೂರುತ್ತಿದ್ದಂತೆಎಚ್ಚೆತ್ತ ಸಹ ಶಿಕ್ಷಕರು ಶಿಕ್ಷಕನ ಕೃತ್ಯವನ್ನು ಖಂಡಿಸಿ ವರ್ತನೆ ಸರಿಪಡಿಸಿಕೊಳ್ಳುವಂತೆ ಸೂಚಿಸಿದ್ದರು.

ಪೋಷಕರು ದೂರಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

‘ಶಿಕ್ಷಕ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಸಾಜ್ ಮಾಡಿಸಿಕೊಂಡ ಕುರಿತು ಪೋಷಕರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಗೆ ದೂರು ನೀಡಲಾಗಿದೆ’ ಎಂದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮೈಲಾರಿ ತಿಳಿಸಿದ್ದಾರೆ.

‘ಶಿಕ್ಷಕ ಮಕ್ಕಳಿಂದ ಮಸಾಜ್ ಮಾಡಿಸಿಕೊಂಡ ಕುರಿತು ಪೋಷಕರಿಂದ ದೂರು ಬಂದಿದೆ. ಈ ಕುರಿತು ಮಾಹಿತಿ ಪಡೆದುಕೊಳ್ಳಲಾಗುತ್ತಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆನಂದಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.