ಶನಿವಾರ, ಜನವರಿ 25, 2020
28 °C

ಸಚಿವ ಈಶ್ವರಪ್ಪಗೆ ಬೆದರಿಕೆ ಕರೆ: ದೂರು ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗದ ಸಿಇಎನ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಈಶ್ವರಪ್ಪ ಅವರ ಆಪ್ತ ಸಹಾಯಕ ಸಂತೋಷ್ ಭಾನುವಾರ ಸಂಜೆ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

‘ತಮಿಳು ಹಾಗೂ ಉರ್ದು ಮಿಶ್ರಿತ ಭಾಷೆ ಮಾತನಾಡುವ ವ್ಯಕ್ತಿಯೊಬ್ಬ ಈಶ್ವರಪ್ಪ ಅವರು ಹಿಂದುತ್ವ, ಸಿಎಎ ಹಾಗೂ ಕಲಂ 370 ಪರವಾಗಿ ಮಾತನಾಡಿದ್ದಾರೆ. 48 ಗಂಟೆಯೊಳಗೆ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು