ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: 109 ಶಾಲಾ, ಕಾಲೇಜುಗಳು ತಂಬಾಕು ಮುಕ್ತ

Last Updated 1 ಅಕ್ಟೋಬರ್ 2019, 19:45 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯ 109 ಶಾಲಾ–ಕಾಲೇಜುಗಳು ತಂಬಾಕು ಮುಕ್ತ ಎಂದು ಜಿಲ್ಲಾಡಳಿತ ಘೋಷಿಸಿದೆ.

ತಂಬಾಕು ಬಳಕೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಗುವುದು. ಶಾಲಾ–ಕಾಲೇಜು ಆವರಣದ 100 ಮೀಟರ್ ಅಂತರದಲ್ಲಿ ತಂಬಾಕು ಪದಾರ್ಥ ನಿರ್ಬಂಧಿಸಲಾಗಿದೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳು ಸೇರಿವೆ. ಆರೋಗ್ಯ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಪರಿಶೀಲನೆ ನಡೆಸಿದ ನಂತರ ಈ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ಶಂಕರಪ್ಪ ತಿಳಿಸಿದ್ದಾರೆ.

ತಂಬಾಕು ಮುಕ್ತ ಘೋಷಣೆ ಮಾಡಲು ಹಲವು ಮಾನದಂಡ ವಿಧಿಸಲಾಗಿತ್ತು. ಶಾಲೆಯ ಪ್ರವೇಶ ದ್ವಾರದಲ್ಲಿ ಕೊಟ್ಪಾ ಕಾಯ್ದೆಯ ನಾಮಫಲಕ ಅಳವಡಿಕೆ, ಶಾಲಾ ಆವರಣದ ಸುತ್ತ 100 ಮೀಟರ್ ಸುತ್ತಳತೆಯಲ್ಲಿ ತಂಬಾಕು ಪದಾರ್ಥಗಳ ಮಾರಾಟ, ಶಾಲೆಯಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚನೆ, ಶಾಲಾ ಆವರಣದ ಒಳಗೆ ತಂಬಾಕು ಉತ್ಪನ್ನಗಳ ಬಳಕೆಗೆ ಕಡಿವಾಣ, ತಂಬಾಕು ಉತ್ಪನ್ನಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮ ಆಯೋಜನೆಯ ಆಧಾರದಲ್ಲಿ ಈ ಘೋಷಣೆ ಮಾಡಲಾಗಿದೆ ಎಂದು ವಿವರ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT