ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂತೆ ಸ್ಥಳ ಸ್ಥಳಾಂತರ ಬೇಡ

ಸಂತೆ ವ್ಯಾಪಾರಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳ ಆಗ್ರಹ
Published 22 ಆಗಸ್ಟ್ 2024, 5:13 IST
Last Updated 22 ಆಗಸ್ಟ್ 2024, 5:13 IST
ಅಕ್ಷರ ಗಾತ್ರ

ಮಧುಗಿರಿ: ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ಮೈದಾನದಲ್ಲಿ ಪ್ರತಿ ಬುಧವಾರ ನಡೆಯುವ ಸಂತೆಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಬಾರದು ಎಂದು ಸಂತೆ ವ್ಯಾಪಾರಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳು ಪುರಸಭೆ ವ್ಯವಸ್ಥಾಪಕಿ ವಸಂತ ಕುಮಾರಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

‌ಪಟ್ಟಣದ ಲಾಲ್ ಬಹಾದ್ದೂರ್ ಶಾಸ್ತ್ರಿ ಮೈದಾನದಲ್ಲಿ ಹಲವು ವರ್ಷಗಳಿಂದ ಪ್ರತಿ ಬುಧವಾರ ಸಂತೆ ನಡೆಯುತ್ತಿದೆ. ಇದರಿಂದ ಸಾರ್ವಜನಿಕರಿಗೆ, ಸಂತೆ ವ್ಯಾಪಾರಿಗಳು ಹಾಗೂ ಬೀದಿ ಬದಿ ವ್ಯಾಪಾರಿಗಳಿಗೂ ಸಾಕಷ್ಟು ಅನುಕೂಲವಾಗುತ್ತಿದೆ. ಪಟ್ಟಣದ ಬಹುತೇಕ ವಾರ್ಡ್‌ನ ನಿವಾಸಿಗಳಿಗೆ ಬಸ್, ಆಟೊ ವ್ಯವಸ್ಥೆ ಕೂಡ ಚೆನ್ನಾಗಿದೆ ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿ ಮೈದಾನದಲ್ಲಿ ನಡೆಯುವ ಸಂತೆಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಿದರೆ ಪಟ್ಟಣದ ಜನರಿಗೆ, ಸಂತೆ ವ್ಯಾಪಾರಿಗಳಿಗೆ ಮತ್ತು ಬೀದಿ ಬದಿ ವ್ಯಾಪಾರಿಗಳಿಗೂ ಸಾಕಷ್ಟು ತೊಂದರೆಯಾಗುತ್ತದೆ. ಆಟೊಗಳನ್ನು ಅವಲಂಬಿಸಿವುದರ ಜೊತೆಗೆ ಸಾಕಷ್ಟು ಹಣವನ್ನೂ ವ್ಯಯಿಸಬೇಕಾಗುತ್ತದೆ. ಆದ್ದರಿಂದ ಲಾಲ್ ಬಹಾದ್ದೂರ್ ಶಾಸ್ತ್ರಿ ಮೈದಾನದಲ್ಲಿ ನಡೆಯುವ ಸಂತೆಯನ್ನು ಯಾವುದೇ ಕಾರಣಕ್ಕೂ ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಬಾರದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಗಿರೀಶ್, ತಿಮ್ಮರಾಜು, ಎಂ.ಶ್ರೀನಿವಾಸಮೂರ್ತಿ, ಗೋವಿಂದರಾಜು, ಮಹೇಶ್, ಶಿವಣ್ಣ, ಮಂಜುಳ, ರಾಧಮ್ಮ, ಪುಟ್ಟಮ್ಮ, ಶ್ರೀನಿವಾಸ್, ವೆಂಕಟೇಶಬಾಬು, ನಾರಾಯಣಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT