ಶನಿವಾರ, ಸೆಪ್ಟೆಂಬರ್ 18, 2021
26 °C

ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರಜಾವಾಣಿ ಇ– ಪೇಪರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’ ಹೊರತರುತ್ತಿರುವ ಇ–ಪೇಪರ್ ತುಂಬಾ ಸಹಕಾರಿಯಾಗಿದೆ. ಅತ್ಯದ್ಭುತವಾಗಿ ರೂಪುಗೊಂಡಿದೆ ಎಂದು ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎನ್.ಬಿ.ಪ್ರದೀಪ್‌ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.

‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳು ಯುಪಿಎಸ್‌ಸಿ, ಕೆಪಿಎಸ್‌ಸಿ, ಬ್ಯಾಂಕಿಂಗ್, ಪಿಎಸ್‌ಐ, ಎಫ್‌ಡಿಎ ಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವವರಿಗೆ ಹೊರ ತರುತ್ತಿರುವ ಇ–ಪತ್ರಿಕೆ ಕುರಿತು ವಿದ್ಯಾವಾಹಿನಿ
ಪ್ರಥಮದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಾರ್ಗದರ್ಶನ ಕಾರ್ಯಕ್ರಮದಲ್ಲಿ
ಮಾತನಾಡಿದರು.

‘ಹೊಸದಾಗಿ ರೂಪುಗೊಳ್ಳುತ್ತಿದ್ದು, ಯುವ ಮನಸ್ಸುಗಳನ್ನು ಸೆಳೆಯುತ್ತದೆ. ಅಪಾರ ಜ್ಞಾನ ಭಂಡಾರವನ್ನು ಒದಗಿಸುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವವರಿಗೆ ಕೈಗನ್ನಡಿಯಾಗಿದ್ದು, ಎಲ್ಲಾ ರೀತಿಯ ಮಾಹಿತಿಯನ್ನು ಒಳಗೊಂಡಿದೆ. ಓದುವುದರ ಜತೆಗೆ ಸಂಬಂಧಿಸಿದ ವಿಚಾರಗಳನ್ನು ಕೇಳುವ ಅವಕಾಶವೂ ಇರುವುದರಿಂದ ಮತ್ತಷ್ಟು ಅನುಕೂಲಕರವಾಗಿದೆ. ಓದಲು ಬಿಡುವು ಸಿಗದಿದ್ದಾಗ ಕೇಳುತ್ತಲೇ ಜ್ಞಾನಾರ್ಜನೆ ಮಾಡಬಹುದು’ ಎಂದು ಹೇಳಿದರು.

ವಿದ್ಯಾರ್ಥಿಗಳು, ಯುವ ಸಮುದಾಯದ ಮನಸ್ಸಿಗೆ ನಾಟುವಂತೆ ವಿಷಯ ಮಂಡಿಸಲಾಗಿದೆ. ಒಂದಕ್ಕಿಂತ ಒಂದು ವಿಚಾರ ಉತ್ತಮವಾಗಿ ಮೂಡಿ ಬಂದಿದೆ. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವವರಿಗೆ ಕಡಿಮೆ ವೆಚ್ಚದಲ್ಲಿ ಅಗತ್ಯ ಮಾಹಿತಿ ಲಭ್ಯವಾಗಲಿದೆ ಎಂದರು.

ನಾಲ್ಕನೇ ತರಗತಿಯಿಂದಲೇ ಪ್ರಜಾವಾಣಿ ಓದಿಕೊಂಡು ಬೆಳೆದಿದ್ದೇನೆ. ಇಂದಿಗೂ ಪತ್ರಿಕೆ ಜತೆಯಲ್ಲೇ ಬೆಳಿಗ್ಗೆ ಆರಂಭವಾಗುತ್ತದೆ. ಅಷ್ಟರ ಮಟ್ಟಿಗೆ ಅವಿನಾಭಾವ ಸಂಬಂಧವಿದೆ ಎಂದು ನೆನಪು ಮಾಡಿಕೊಂಡರು. ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಶುಲ್ಕದ ಒಟ್ಟು ಮೊತ್ತದಲ್ಲಿ ಅರ್ಧದಷ್ಟು ಹಣವನ್ನು ಸಂಸ್ಥೆ ವತಿಯಿಂದ ಭರಿಸಲಾಗುವುದು ಎಂದು ಅವರು ಪ್ರಕಟಿಸಿದರು.

ಪ್ರಸರಣ ವಿಭಾಗದ ಪ್ರಧಾನ ವ್ಯವಸ್ಥಾಪಕ ಆಲಿವರ್ ವೆಸ್ಲಿ ಮಾತನಾಡಿ, ‘ಸ್ಪರ್ಧಾ ಜಗತ್ತು, ಯುವ ಸಮುದಾಯವನ್ನು ಗಮನದಲ್ಲಿ ಇಟ್ಟುಕೊಂಡು ಇ–ಪೇಪರ್ ಹೊರ ತರಲಾಗುತ್ತಿದೆ. ವಿದ್ಯಾರ್ಥಿಗಳ ಮುಂದಿನ ಭವಿಷ್ಯ, ಸ್ಪರ್ಧಾತ್ಮಕ ಜಗತ್ತಿಗೆ ಯುವ ಪೀಳಿಗೆಯನ್ನು ಸಜ್ಜುಗೊಳಿಸುವ ಉದ್ದೇಶದೊಂದಿಗೆ ರೂಪಿಸಲಾಗಿದೆ. ಕನ್ನಡ ಹಾಗೂ ಇಂಗ್ಲಿಷ್– ಎರಡೂ ಭಾಷೆಯಲ್ಲೂ ಲಭ್ಯವಿದೆ’ ಎಂದು ತಿಳಿಸಿದರು.

ದಿ ಪ್ರಿಂಟರ್ಸ್ (ಮೈಸೂರು) ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮ್ಯಾನೇಜ್‌ಮೆಂಟ್ ಟ್ರೈನಿ ಸೌಭಾಗ್ಯಲಕ್ಷ್ಮಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜು ಪ್ರಾಂಶುಪಾಲ ನವೀನ್ ಕುಮಾರ್, ಪ್ರಸರಣ ವಿಭಾಗದ ಉಪಪ್ರಧಾನ ವ್ಯವಸ್ಥಾಪಕ ಜಗನ್ನಾಥ್ ಜೋಯಿಸ್, ಪ್ರಸರಣ ವಿಭಾಗದ ಎಕ್ಸಿಕ್ಯೂಟಿವ್ ಸಂಗಮೇಶ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.