ಮಧುಗಿರಿ: ತನ್ನ ಜಮೀನಿಗೆ ರಸ್ತೆ ಮಾಡಿಕೊಡುವಂತೆ ಲೋಕಾಯುಕ್ತರೇ ಸೂಚಿಸಿದ್ದರೂ ಕೂಡ ಕ್ಯಾರೆ ಎನ್ನದ ಕಂದಾಯ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಅಲೆದಾಡಿಸಿದ್ದಕ್ಕೆ ಆಕ್ರೋಶಗೊಂಡ ರೈತರೊಬ್ಬರು ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು ಮುಂದಾಗಿದ್ದಾರೆ.

ತಾಲ್ಲೂಕಿನ ದೊಡ್ಡರಿ ಹೋಬಳಿಯ ಜಕ್ಕೇನಹಳ್ಳಿ ಗ್ರಾಮದ ರೈತ ಪ್ರಸನ್ನಕುಮಾರ್ ಎಂಬವರು ಮಂಗಳವಾರ ತಾಲ್ಲೂಕು ಕಚೇರಿ ಮುಂದೆ ಮೈಕ್ ಹಿಡಿದು, ‘ನನಗೆ ಅಧಿಕಾರಿಗಳಿಗೆ ಲಂಚ ನೀಡಲು ಹಣವಿಲ್ಲ. ನಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡುತ್ತೇನೆ ಬನ್ನಿ ಬನ್ನಿ’ ಎಂದು ಘೋಷಣೆ ಕೂಗಿದರು.

ಪ್ರಸನ್ನಕುಮಾರ್ ತನಗಿರುವ ಜಮೀನಿನಲ್ಲೇ ತರಕಾರ, ಇತರೆ ವ್ಯವಸಾಯೋತ್ಪನ್ನ ಬೆಳೆ ಬೆಳೆದು ಜೀವನ ನಡೆಸುತ್ತಿದ್ದಾರೆ. ಆದರೆ ಜಮೀನಿಗೆ ರಸ್ತೆ ಇಲ್ಲದ ಕಾರಣ ರಸ್ತೆಗಾಗಿ 2 ವರ್ಷದ ಹಿಂದೆ ತಾಲ್ಲೂಕು ಆಡಳಿತಕ್ಕೆ ಮನವಿ ನೀಡಿದ್ದಾರೆ. ಇತ್ತ ದಾರಿ ಒತ್ತುವರಿ ಬಿಡಿಸಿಕೊಡದೆ ಅತ್ತ ಹೊಸ ದಾರಿ ಮಾಡಿಕೊಡದೆ ಅವರ ಮನವಿಗೆ ಕಿವಿಗೊಡದ ಅಧಿಕಾರಿಗಳ ನಡೆಗೆ ಬೇಸರ ವ್ಯಕ್ತಪಡಿಸಿ ಲೋಕಾಯುಕ್ತ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ರೈತನ ಜಮೀನಿಗೆ ಒಂದು ತಿಂಗಳಲ್ಲಿ ರಸ್ತೆ ನಿರ್ಮಿಸಿಕೊಡಲು ಲೋಕಾಯುಕ್ತ ಸೂಚಿಸಿತ್ತು.

ಎರಡು ತಿಂಗಳಾದರೂ ರಸ್ತೆ ನಿರ್ಮಾಣಕ್ಕಾಗಿ ಸ್ಥಳ ಮಹಜರು ಹಾಗೂ ಪರಿಶೀಲನೆಗೆ ಬರಲು ಕೆಲವು ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದು, ಹಣವಿಲ್ಲದ ರೈತ ಪ್ರಸನ್ನಕುಮಾರ್ ಅಧಿಕಾರಿಗಳ ಈ ನಡೆಗೆ ಬೇಸರ ವ್ಯಕ್ತಪಡಿಸಿ ತಹಶೀಲ್ದಾರ್ ಬಳಿ ಮನವಿ ಮಾಡಿದ್ದರು. ಅವರು ರಸ್ತೆ ಮಾಡಿಕೊಡಲು ಸೂಚಿಸಿದ್ದರು. ಆದರೆ ಇಲ್ಲಿಯವರೆಗೂ ರಸ್ತೆ ನಿರ್ಮಾಣಕ್ಕೆ ಕಂದಾಯಾಧಿಕಾರಿ ಹಾಗೂ ಶಿವನಗೆರೆ ಗ್ರಾಮಲೆಕ್ಕಿಗರು ಬಂದಿಲ್ಲ.

ಹೀಗಾಗಿ ಬುಧವಾರ ಆಡಳಿತ ಕಚೇರಿ ಮುಂದೆ ಮೈಕ್ ಹಿಡಿದು, ‘ಲಂಚ ನೀಡಲು ಹಣವಿಲ್ಲ. ಹಾಗಾಗಿ ಬೆಳೆದ ಮೂಲಂಗಿ ನೀಡುತ್ತೇನೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಸ್ಯೆ ಈಡೇರಿಸದಿದ್ದರೆ ಆತ್ಮಹತ್ಯೆ: ಜಮೀನಿನ ರಸ್ತೆಗೆ ಲಂಚಕೊಡಲು ಹಣವಿಲ್ಲದೆ ನಾನು ಬೆಳೆದ ಮೂಲಂಗಿ ನೀಡಲು ಬಂದಿದ್ದೇನೆ. ಅದು ಸಾಲದಿದ್ದರೆ ನನ್ನ ಮನೆ ಬರೆದು ಕೊಡುವೆ. ಇಲ್ಲವಾದರೆ ನನಗೆ ತಹಶೀಲ್ದಾರ್ ಕೆಲಸ ಕೊಡಿ. ನನ್ನ ಅಸ್ತಿಯನ್ನೇ ಬರೆದು ಕೊಡುವೆ. ಈ ಬಗ್ಗೆ ಸಿ.ಎಂ ಬಳಿಗೂ ಹೋಗಿದ್ದೇನೆ. ಕಂದಾಯ ಸಚಿವ ಕೃಷ್ಣ ಬೈರೇಗೌಡರಿಂದ ಜಮೀನಿಗೆ ದಾರಿ ಬಿಡಿಸಿಕೊಡುವಂತೆ ಆದೇಶ ತಂದಿದ್ದೆ. ನಕಾಶೆಯಲ್ಲೂ ರಸ್ತೆಯಿದ್ದು ನನಗೆ ರಸ್ತೆ ಮಾಡಿಕೊಡದೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ. ನನ್ನ ಸಮಸ್ಯೆಗೆ ಪರಿಹಾರ ನೀಡದಿದ್ದರೆ ವಾರದಲ್ಲಿ ಇದೇ ಕಚೇರಿಯಲ್ಲಿ ನೇಣು ಹಾಕಿಕೊಳ್ಳುತ್ತೇನೆ ಎಂದು ರೈತ ಎಚ್ಚರಿಸಿದ್ದಾರೆ.

ವಾರದೊಳಗೆ ರಸ್ತೆ ರೈತರ ಸಮಸ್ಯೆಗೆ ಕಂದಾಯ ಇಲಾಖೆ ಪರಿಹಾರ ನೀಡಲಿದೆ. ನಮ್ಮದು ಎಂದಿಗೂ ಪಾರದರ್ಶಕ ಕೆಲಸಕ್ಕೆ ಬೆಲೆ ನೀಡುವ ಇಲಾಖೆ. ಅಧಿಕಾರಿಗಳ ತಪ್ಪಿದ್ದರೆ ಕಾನೂನು ರೀತಿ ಕ್ರಮಕ್ಕೆ ಮುಂದಾಗುತ್ತೇವೆ. ನಕಾಶೆ ರಸ್ತೆ ಇದ್ದರೆ ವಾರದೊಳಗೆ ರಸ್ತೆ ನಿರ್ಮಿಸುವ ಕೆಲಸ ಮಾಡಿಕೊಡುತ್ತೇವೆ. ಬಬ್ಬ ರೈತ ಈ ನಾಡಿನ ಅಸ್ತಿ. ಅವರು ಸಾಯುವ ಮಾತಾಡಬಾರದು. ಗೋಟೂರು ಶಿವಪ್ಪ ಉಪವಿಭಾಗಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.