ಮಂಗಳವಾರ, ಡಿಸೆಂಬರ್ 1, 2020
18 °C
ತುರುವೇಕೆರೆಯಲ್ಲಿ ಶಾಸಕ ಮಸಾಲ ಜಯರಾಂ ಮಾಹಿತಿ

ಮಲ್ಲಾಘಟ್ಟ ಕೆರೆ ಅಭಿವೃದ್ಧಿಗೆ ₹ 1 ಕೋಟಿ: ಶಾಸಕ ಮಸಾಲ ಜಯರಾಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುರುವೇಕೆರೆ: ತಾಲ್ಲೂಕಿನ ಮಲ್ಲಾಘಟ್ಟ ಕೆರೆ ಹಾಗೂ ಗಂಗಾಧರೇಶ್ವರ ದೇವಾಲಯವನ್ನು ಪ್ರವಾಸಿ ತಾಣವಾಗಿಸಲು ₹ 1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಶಾಸಕ ಮಸಾಲ ಜಯರಾಂ ತಿಳಿಸಿದರು.

ಮಲ್ಲಾಘಟ್ಟ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ‘ಕೆರೆ ಮೈದುಂಬಿ ಹರಿಯುತ್ತಿದ್ದು, ಜನರನ್ನು ಆಕರ್ಷಿಸುತ್ತಿದೆ. ಅದಕ್ಕೆ ಪೂರಕ ಸೌಕರ್ಯಗಳನ್ನು ಕಲ್ಪಿಸಬೇಕಿದೆ’ ಎಂದರು.

ಕೆರೆ ಹಿಂಭಾಗದಲ್ಲಿರುವ ಗಂಗಾಧರೇಶ್ವರ ದೇವಾಲಯದ ಪಕ್ಕದಲ್ಲಿ ಹೊರಾಂಗಣ ವೇದಿಕೆ ಹಾಗೂ ಛತ್ರ ನಿರ್ಮಿಸಲಾಗುವುದು ಎಂದರು.

ಆನೇಕೆರೆ ಪಂಚಾಯಿತಿ ಅಧಿಕಾರಿಗಳು, ಮಲ್ಲಾಘಟ್ಟಕೆರೆಗೆ ಬರುವ ಪ್ರವಾಸಿಗರ ವಾಹನಗಳಿಗೆ ನಿಲುಗಡೆ, ತುಂಗುದಾಣ ಸೇರದಂತೆ ಹಲವು ಸೌಕರ್ಯ ಕಲ್ಪಿಸಲಾಗುವುದು. ಅದರಿಂದ ಬರುವ ಶುಲ್ಕದಿಂದ ಕೆರೆ ನೈರ್ಮಲ್ಯ ಹಾಗೂ ನಿರ್ವಹಣೆ ಮಾಡಲಾಗುವುದು ಎಂದು ತಿಳಿಸಿದರು.

ಗಂಗಾಧರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಪಟ್ಟಣ ಪಂಚಾಯಿತಿ ಸದಸ್ಯರಾದ ಚಿದಾನಂದ್, ರವಿ, ಆಶಾರಾಣಿ, ಮುಂಖಡರಾದ ಕೊಂಡಜ್ಜಿ ವಿಶ್ವನಾಥ್, ಬಿ.ಎಸ್.ದೇವರಾಜ್, ವಿ.ಟಿ.ವೆಂಕಟರಾಂ, ಸೋಮಣ್ಣ, ಸುರೇಶ್, ದಿನೇಶ್ ಉಪಸ್ಥಿತರಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.