ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ಎಂಜಿನಿಯರ್‌ಗೆ ₹14 ಲಕ್ಷ ವಂಚನೆ

Published 2 ಜೂನ್ 2024, 15:03 IST
Last Updated 2 ಜೂನ್ 2024, 15:03 IST
ಅಕ್ಷರ ಗಾತ್ರ

ತುಮಕೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಒಳಗಾಗಿ ನಗರದ ಕ್ಯಾತ್ಸಂದ್ರ ನಿವಾಸಿ, ಎಂಜಿನಿಯರ್‌ ಅರುಣ್‌ ಕರಿಕಟ್ಟಿ ಎಂಬುವರು ₹14.45 ಲಕ್ಷ ಕಳೆದುಕೊಂಡಿದ್ದಾರೆ.

ಫೇಸ್‌ಬುಕ್‌ನಲ್ಲಿ ‘ಟಾಟಾ ಇನ್‌ವೆಸ್ಟ್‌ಮೆಂಟ್‌ ಕ್ಲಬ್‌’ ಎಂಬ ಜಾಹೀರಾತಿನಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಉತ್ತಮ ಲಾಭ ಪಡೆಯಬಹುದು ಎಂಬ ಮಾಹಿತಿ ನೋಡಿದ್ದಾರೆ. ನಂತರ ಜಾಹೀರಾತಿನ ಲಿಂಕ್‌ ಮೇಲೆ ಕ್ಲಿಕ್‌ ಮಾಡಿದ್ದು, ಅವರನ್ನು ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಸೇರಿಸಿದ್ದಾರೆ. ಇದಾದ ಮೇಲೆ ಒಂದು ಖಾತೆ ತೆಗೆದು ಹಣ ಹೂಡಿಕೆ ಮಾಡುವಂತೆ ತಿಳಿಸಿದ್ದಾರೆ.

ಮಾರ್ಚ್‌ 17ರಿಂದ ಮೇ 7ರ ವರೆಗೆ ವಿವಿಧ ಬ್ಯಾಂಕ್‌ ಖಾತೆಗಳಿಗೆ ಹಂತ ಹಂತವಾಗಿ ₹14,45,045 ಹಣ ವರ್ಗಾವಣೆ ಮಾಡಿದ್ದಾರೆ. ‘ಟಾಟಾ ಇನ್‌ವೆಸ್ಟ್‌ಮೆಂಟ್‌ ಕ್ಲಬ್‌’ನಿಂದ ಅವರಿಗೆ ಇದುವರೆಗೆ ಯಾವುದೇ ಹಣ ವಾಪಸ್‌ ಬಂದಿಲ್ಲ. ‘ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ಮೋಸ ಮಾಡಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ’ ಅರುಣ್‌ ಸೈಬರ್‌ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT