ತುಮಕೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರಗತಿಪರ ನಾಗರಿಕ ಸಂಘಟನೆಗಳ ಒಕ್ಕೂಟ, ಸಿಐಟಿಯು, ಸಿಪಿಐ(ಎಂ), ದಲಿತಪರ ಸಂಘಟನೆ ಮತ್ತು ಇತರೆ ಸಂಘಟನೆಗಳು ಪ್ರತಿಭಟನೆ ಹಾಗೂ ಬಂದ್ ನಡೆಸುವ ಸಾಧ್ಯತೆ ಇರುವುದರಿಂದ ಮುಂಜಾಗೃತಾ ಕ್ರಮವಾಗಿ ತುಮಕೂರು ಜಿಲ್ಲೆಯಾದ್ಯಂತ ಡಿ.18 ರಂದು ರಾತ್ರಿ 8 ರಿಂದ ಡಿ.21ರ ಮಧ್ಯರಾತ್ರಿ 12ರವರೆಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಆದೇಶಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಾಶಪಡಿಸದಂತೆ ತಡೆಗಟ್ಟಲು ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ ಕಲಂ 144 ಅಡಿ ನಿಷೇದಾಜ್ಞೆ ಹೊರಡಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಷರತ್ತುಗಳು: ನಿಷೇದಾಜ್ಞೆ ಅವಧಿಯಲ್ಲಿ 5 ಜನರ ಮೇಲ್ಪಟ್ಟು ಗುಂಪುಗಾರಿಕೆ, ಇತರೆ ಕಾನೂನು ಬಾಹಿರ ಚಟುವಟಿಕೆ ನಡೆಸುವಂತಿಲ್ಲ. ಸ್ಪೋಟಕ ವಸ್ತುಗಳು, ಮಾರಕಾಸ್ತ್ರ ಕೊಂಡೊಯ್ಯುವಂತಿಲ್ಲ. ಯಾವುದೇ ಬಹಿರಂಗ ಪ್ರಚಾರ ಸಭೆ, ಸಮಾರಂಭ ಮತ್ತು ಮರೆವಣಿಗೆ ನಡೆಸುವಂತಿಲ್ಲ. ಮತೀಯ ಭಾವನೆ ಕೆರಳಿಸುವಂತಹ ಪ್ರಚೋದನಕಾರಿ ಹೇಳಿಕೆ ನೀಡುವುದು, ಘೋಷಣೆ ಕೂಗುವುದು, ಭಿತ್ತಿ ಪತ್ರಗಳನ್ನು ಪ್ರಕಟಿಸುವುದನ್ನು ನಿಷೇಧಿಸಲಾಗಿದೆ.

ಅಲ್ಲದೆ, ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವುಂಟು ಮಾಡುವುದು, ಸುಳ್ಳು ವದಂತಿ ಹರಡುವಂತಿಲ್ಲ. ಸಾರ್ವಜನಿಕರ ಪ್ರಾಣ, ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡುವಂತಿಲ್ಲ. ಶವಸಂಸ್ಕಾರ, ಮದುವೆ ಮತ್ತು ಧಾರ್ಮಿಕ ಕಾರ್ಯಗಳನ್ನು ಹೊರತುಪಡಿಸಿ ಯಾವುದೇ ಸಭೆ ಸಮಾರಂಭ ಮಾಡುವಂತಿಲ್ಲ. ಈ ಷರತ್ತುಗಳನ್ನು ಉಲ್ಲಂಘಿಸುವವರನ್ನು ಕೂಡಲೇ ಬಂಧಿಸಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಅವರು ಸೂಚಿಸಿದ್ದಾರೆ.

ಕ್ರೀಡಾಕೂಟ ಮುಂದೂಡಿಕೆ:

ನಿಷೇದಾಜ್ಞೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಡಿ.19 ರಿಂದ 21ರವರೆಗೆ ಡಿ.ಎ.ಆರ್. ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಕ್ರೀಡಾಕೂಟ ಸಹ ಮುಂದೂಡಲಾಗಿದೆ. ಮುಂದೆ ಕ್ರೀಡಾಕೂಟ ನಡೆಯುವ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.