ಶಿರಾ: ವಿಧಾನಸಭೆ ಉಪ ಚುನಾವಣೆಯ ಪ್ರಚಾರಕ್ಕಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ 15 ದಿನ ತಾಲ್ಲೂಕಿನಲ್ಲಿ ವಾಸ್ತವ್ಯ ಹೂಡಿ ಪ್ರತಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.

ಬೆಂಗಳೂರಿನ ಜೆ.ಪಿ ಭವನದಲ್ಲಿ ಶುಕ್ರವಾರ ಶಿರಾ ಶಾಸಕರಾಗಿದ್ದ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ, ಪುತ್ರ ಬಿ.ಎಸ್. ಸತ್ಯಪ್ರಕಾಶ್ ಸೇರಿದಂತೆ ತಾಲ್ಲೂಕಿನ ಜೆಡಿಎಸ್ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ಅವರು ಈ ಭರವಸೆ ನೀಡಿದ್ದಾರೆ.

ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರು ಕಾರ್ಯಪ್ರವೃತ್ತರಾಗಬೇಕು. ಗ್ರಾಮಗಳಿಗೆ ಭೇಟಿ ನೀಡಿ ಪಕ್ಷ ಸಂಘಟಿಸುವಂತೆ ಸೂಚಿಸಿದ್ದಾರೆ.

‘ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಮರ್ಥ ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಯಾರಿಗೆ ಟಿಕೆಟ್ ದೊರೆತರೂ, ಪ್ರತಿಯೊಬ್ಬರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ನಾನು ಗ್ರಾಮವಾಸ್ಥವ್ಯ ಮಾಡಿ ಅಭ್ಯರ್ಥಿಯನ್ನು ಶತಾಯ ಗತಾಯ ಗೆಲ್ಲಿಸಲು ಪ್ರಯತ್ನಿಸುತ್ತೇನೆ’ ಎಂದು ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.