ಶನಿವಾರ, ಡಿಸೆಂಬರ್ 5, 2020
19 °C

850ರಲ್ಲಿ 150 ಮಂದಿಗೆ ಮಧುಮೇಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ರಾಜ್ಯ ಸರ್ಕಾರಿ ವೈದ್ಯರ ಸಂಘದಿಂದ ಮಧುಮೇಹ ಉಚಿತ ತಪಾಸಣೆ ಮಾಡಲಾಯಿತು.

30 ವರ್ಷ ಮೇಲ್ಪಟ್ಟ 850 ಮಂದಿ ತಪಾಸಣೆಗೆ ಒಳಗಾಗಿದ್ದು, ಅವರಲ್ಲಿ 150 ಮಂದಿಗೆ ಮಧುಮೇಹ ಇರುವುದು ಪತ್ತೆಯಾಗಿದೆ.

ನಗರದ ವಿಶ್ವವಿದ್ಯಾಲಯ ಮುಂಭಾಗ ಮಧುಮೇಹ ತಪಾಸಣೆ ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ, ‘ಮಧುಮೇಹ ಸಾರ್ವತ್ರಿಕ ರೋಗವಾಗಿದೆ. ಬದಲಾದ ಜೀವನಶೈಲಿಯಿಂದ ಮಧುಮೇಹ ಹೆಚ್ಚುತ್ತಿದೆ. ನಿಯಮಿತವಾಗಿ ವೈದ್ಯರ ಬಳಿ ತಪಾಸಣೆಗೆ ಒಳಪಡುವುದರ ಮೂಲಕ ಇದರಿಂದ ಬರುವ ಹೃದಯ ಸಂಬಂಧಿತ ಸಮಸ್ಯೆಯನ್ನು ತಡೆಯಬಹುದು’ ಎಂದರು.

ಅನಿಯಮಿಯ ಮಧುಮೇಹದಿಂದ ಬಳಲುತ್ತಿರುವವರು ಕೋವಿಡ್ 19‌ನಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಮಧುಮೇಹ ನಿಯಂತ್ರಿಸುವುದು ಅವಶ್ಯವಾಗಿದೆ ಎಂದು ಹೇಳಿದರು.

ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶ್ರೀನಾಥ್, ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ಡಾ.ರಾಜಶೇಖರಯ್ಯ ಮಾತನಾಡಿದರು. ಶಾಸಕ ಎಸ್.ಆರ್.ಶ್ರೀನಿವಾಸ್ ಸೇರಿದಂತೆ ಹಲವರು ತಪಾಸಣೆಗೆ ಒಳಗಾದರು. ಡಾ.ಮೋಹನ್, ಡಾ.ಮಹೇಶ್, ಡಾ.ನಾಗರಾಜ ಪಾಟೀಲ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು