ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಾ: ನಾಯಿ ಕಡಿದು 17 ಮಂದಿಗೆ ಗಾಯ

Published 15 ಜೂನ್ 2024, 15:32 IST
Last Updated 15 ಜೂನ್ 2024, 15:32 IST
ಅಕ್ಷರ ಗಾತ್ರ

ಶಿರಾ: ತಾಲ್ಲೂಕಿನ ತಾವರೆಕೆರೆ ಹಾಗೂ ಪಂಜಿಗಾನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಶನಿವಾರ ನಾಯಿ ಕಚ್ಚಿ 17 ಮಂದಿ ಗಾಯಗೊಂಡಿದ್ದಾರೆ.

ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರು ಸೇರಿದಂತೆ ಸಿಕ್ಕ ಸಿಕ್ಕವರನ್ನು ಕಚ್ಚಿ ಗಾಯಗೊಳಿಸಿದೆ.

ಗಾಯಗೊಂಡವರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ತಾಲ್ಲೂಕು ಆರೋಗ್ಯಾಧಿಕಾರಿ ಮತ್ತು ಮೇಲ್ವಿಚಾರಕ ಸಿಬ್ಬಂದಿ ಆಸ್ಪತ್ರೆಗೆ ಭೇಟಿನೀಡಿ ಪ್ರಕರಣಗಳ ಪರಿಶೀಲನೆ ನಡೆಸಿ, ಮಾಹಿತಿ ಸಂಗ್ರಹಿಸಿದ ನಂತರ ಸಂಬಂಧಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಿಷಯ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT