ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

180 ಗ್ರಾಂ ಚಿನ್ನಾಭರಣ ಕಳವು

Published 28 ಡಿಸೆಂಬರ್ 2023, 5:03 IST
Last Updated 28 ಡಿಸೆಂಬರ್ 2023, 5:03 IST
ಅಕ್ಷರ ಗಾತ್ರ

ತುಮಕೂರು: ತಾಲ್ಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಿವೃತ್ತ ಶಿಕ್ಷಕ ಶಿವರುದ್ರಪ್ಪ ಎಂಬುವರ ಮನೆಯ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು 180 ಗ್ರಾಂ ಚಿನ್ನಾಭರಣ, ₹6 ಸಾವಿರ ನಗದು ಕಳವು ಮಾಡಿದ್ದಾರೆ.

ರಾತ್ರಿ 8 ಗಂಟೆ ಸುಮಾರಿಗೆ ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸದಸ್ಯರೆಲ್ಲ ದೇವಸ್ಥಾನಕ್ಕೆ ಹೋಗಿದ್ದರು. ಮಧ್ಯರಾತ್ರಿ ಮನೆಗೆ ವಾಪಸ್ ಬಂದಾಗ ಕಳ್ಳತನವಾಗಿರುವುದು ಗಮನಕ್ಕೆ ಬಂದಿದೆ. ಮನೆಯ ಹಿಂಬಾಗಿಲು ಮುರಿದು ಒಳಗಡೆ ನುಗ್ಗಿ, ಚಿನ್ನಾಭರಣ ದೋಚಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಂಗಲ್ಯ ಸರ ಕಳವು:

ತಾಲ್ಲೂಕಿನ ನರಸಾಪುರದಲ್ಲಿ ಬುಧವಾರ ಮಧ್ಯಾಹ್ನ ಬೈಕ್‌ನಲ್ಲಿ ಬಂದಿದ್ದ ಇಬ್ಬರು ಕಳ್ಳರು ನೀರು ಕೇಳುವ ನೆಪದಲ್ಲಿ ಮಹಿಳೆಯಿಂದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಜಯಮ್ಮ ಮನೆಯ ಮುಂದಿನ ವರಾಂಡದಲ್ಲಿ ಕುಳಿತಿದ್ದರು. ಈ ವೇಳೆ ಇಬ್ಬರು ಕಳ್ಳರು ಬೈಕ್‌ನಲ್ಲಿ ಬಂದು ಕುಡಿಯಲು ನೀರು ಕೇಳುವ ನೆಪದಲ್ಲಿ 50 ಗ್ರಾಂ ಸರ ಕಿತ್ತುಕೊಂಡು ಜಾಗ ಖಾಲಿ ಮಾಡಿದ್ದಾರೆ.

‘ಮನೆಗಳ್ಳತನ, ಸರ ಕಳವು ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಎಚ್ಚರಿಕೆಯಿಂದ ಇರಬೇಕು. ಮನೆಗೆ ಬೀಗ ಹಾಕಿಕೊಂಡು ಹೊರಗಡೆ ಹೋಗುವಾಗ ಪೊಲೀಸರಿಗೆ ಮಾಹಿತಿ ನೀಡಿದರೆ ಮನೆ ಮುಂಭಾಗದಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸುತ್ತಾರೆ. ಇದರಿಂದ ಕಳ್ಳತನ ತಡೆಯುವುದು ಸುಲಭವಾಗುತ್ತದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT