ಗುರುವಾರ, 21 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು| ಸೆ. 19ರಂದು ‘ಹಿಂದೂ ಮಹಾಗಣಪತಿ’ ಪ್ರತಿಷ್ಠಾಪನೆ

ವಿಶ್ವ ಹಿಂದೂ ಪರಿಷತ್, ಬಜರಂಗದಳದಿಂದ ವಿವಿಧ ಕಾರ್ಯಕ್ರಮ
Published 2 ಸೆಪ್ಟೆಂಬರ್ 2023, 14:49 IST
Last Updated 2 ಸೆಪ್ಟೆಂಬರ್ 2023, 14:49 IST
ಅಕ್ಷರ ಗಾತ್ರ

ತುಮಕೂರು: ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಮಹಾ ಗಣಪತಿ ಸ್ವಾಗತ ಸಮಿತಿಯಿಂದ ನಗರದ ಬಿಜಿಎಸ್‌ ವೃತ್ತದ ಬಳಿಯ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಸೆ. 19ರಂದು ಹಿಂದೂ ಮಹಾಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ.

ಸೆ. 30ರಂದು ಬೆಳಿಗ್ಗೆ 11 ಗಂಟೆಗೆ ಗಣಪತಿ ಮೂರ್ತಿ ವಿಸರ್ಜನಾ ಮಹೋತ್ಸವ ನಡೆಯಲಿದೆ. ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿದೆ. ಕಳೆದ 5 ವರ್ಷಗಳಿಂದ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದೆ. ಜನರಲ್ಲಿ ಸಾಮರಸ್ಯ, ಸಂಸ್ಕಾರ, ಸಂಸ್ಕೃತಿ, ರಾಷ್ಟ್ರೀಯ ಭಾವನೆ ಮೂಡಿಸಲು ಗಣೇಶ ಹಬ್ಬ ಆಚರಿಸಲಾಗುತ್ತಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್‌ ಇಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸ್ವಾಗತ ಸಮಿತಿಯ ನಿರ್ದೇಶಕ ಕೆ.ಎಸ್.ಮಂಜುನಾಥ್, ‘ವಿಸರ್ಜನಾ ಮಹೋತ್ಸವದಲ್ಲಿ ಜಿಲ್ಲೆಯ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಈಗಿನಿಂದಲೇ ಸಿದ್ಧತೆ ನಡೆದಿದೆ. ಹಲವು ಜನಪದ ಕಲಾ ತಂಡಗಳು ಭಾಗವಹಿಸಲಿವೆ. ಸ್ಥಳೀಯ ಕಲಾ‌ವಿದರಿಗೆ ಆದ್ಯತೆ ನೀಡಲಾಗುತ್ತದೆ. ವಿಸರ್ಜನಾ ಮಹೋತ್ಸವಕ್ಕೆ ಹೆಚ್ಚಿನ ಮೆರುಗು ನೀಡಲಾಗುತ್ತದೆ’ ಎಂದರು.

ಗಣಪತಿ ಮೂರ್ತಿ ವಿಸರ್ಜನೆಗೆ ಅಮಾನಿಕೆರೆ, ಚಿಕ್ಕಪೇಟೆಯ ಕೆರೆ ನಿಗದಿಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಸೂಕ್ತ ಜಾಗ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಥಪೂರ್ಣವಾಗಿ ಗಣೇಶ ಹಬ್ಬ ಆಚರಣೆಗೆ ಸಮಿತಿ ಮುಂದಾಗಿದೆ ಎಂದು ಹೇಳಿದರು.

ಸ್ವಾಗತ ಸಮಿತಿಯ ಜಿ.ಕೆ.ಶ್ರೀನಿವಾಸ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT