ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರಿಗೆ ಒಂದೇ ಸ್ಥಳದಲ್ಲಿ ಎರಡು ವರ್ಷ ಕೆಲಸ ಮಾಡಲು ಅವಕಾಶ: ಜಿ.ಪರಮೇಶ್ವರ

Published 3 ಫೆಬ್ರುವರಿ 2024, 16:18 IST
Last Updated 3 ಫೆಬ್ರುವರಿ 2024, 16:18 IST
ಅಕ್ಷರ ಗಾತ್ರ

ತುಮಕೂರು: ಪೊಲೀಸರು ಒಂದೇ ಸ್ಥಳದಲ್ಲಿ ಎರಡು ವರ್ಷ ಕೆಲಸ ಮಾಡಲು ಅವಕಾಶ ಮಾಡಿಕೊಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಸರ್ಕಾರಿ ನೌಕರರು, ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡಿದ ಅವರು, ಪೊಲೀಸರ ವರ್ಗಾವಣೆಗೆ ಸಂಬಂಧಿಸಿದ ಸೇವಾ ನಿಯಮಾವಳಿ ಸಡಿಲಿಸಲಾಗುವುದು ಎಂದರು.

ಪೊಲೀಸರು ಒಂದು ಕಡೆ ಒಂದು ವರ್ಷ ಕೆಲಸ ಮಾಡಿದರೆ ವರ್ಗಾವಣೆಗೆ ಅವಕಾಶವಿದೆ. ಈ ನಿಯಮ ಸಡಿಲಿಸಿ ಕನಿಷ್ಠ ಎರಡು ವರ್ಷ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. 

‘ಆಡಳಿತದಲ್ಲಿ ಚುರುಕು ತರಲು ವರ್ಗಾವಣೆಯೊಂದೇ ಅಸ್ತ್ರವಲ್ಲ. ಅದರಲ್ಲಿ ನನಗೆ ನಂಬಿಕೆ ಇಲ್ಲ. ಒಂದೇ ಸ್ಥಳದಲ್ಲಿ ಕನಿಷ್ಠ ಮೂರು ವರ್ಷ ಕೆಲಸ ಮಾಡಲು ಅವಕಾಶ ನೀಡಿದರೆ ಜನಸಾಮಾನ್ಯರಿಗೆ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ. ಅನಿವಾರ್ಯ ಸಂದರ್ಭದಲ್ಲಿ ಮಾತ್ರ ವರ್ಗಾವಣೆ ಮಾಡಬೇಕಾಗುತ್ತದೆ’ ಎಂದರು.

ನೌಕರರಿಗೆ ವರ್ಗಾವಣೆ ಹೆಸರಿನಲ್ಲಿ ತೊಂದರೆ ಕೊಡುವುದಿಲ್ಲ. ಆದರೆ, ಅಧಿಕಾರಿಗಳು ಯಾರಿಗೂ ಅನ್ಯಾಯ ಮಾಡದೆ, ಮೇಲು,ಕೀಳು  ಬೇಧ,ಭಾವ ತೋರದೆ ಕೆಲಸ ಮಾಡಬೇಕು. ಸಾಮಾನ್ಯ ಜನರಿಗೂ ಸ್ಪಂದಿಸಬೇಕು ಎಂದು ಸಲಹೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT