ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರಿನಲ್ಲಿ 23 ವರ್ಷದ ಮಹಿಳೆ ಸಾವು; ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ

ತುಮಕೂರಿನಲ್ಲಿ 23 ವರ್ಷದ ಮಹಿಳೆ ಸಾವು; 653ಕ್ಕೆ ಹೆಚ್ಚಿದ ಸೋಂಕಿತರು
Last Updated 19 ಜುಲೈ 2020, 9:55 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿತ್ಯವೂ ಕೊರೊನಾ ಸೋಂಕಿತ ರೋಗಿಗಳು ಮೃತಪಡುತ್ತಿದ್ದಾರೆ. ಇದು ಸಾವಿನ ಸಂಖ್ಯೆಯನ್ನು ಹೆಚ್ಚಿಸುತ್ತಲೇ ಇದೆ. ಮೃತರಲ್ಲಿ ವಯಸ್ಸಾದವರೇ ಹೆಚ್ಚಿದ್ದಾರೆ. ಮೃತರಲ್ಲಿ ಬಹುತೇಕರು ನಾನಾ ರೋಗಗಳಿಂದ ಬಳಲುತ್ತಿದ್ದು ಕೊರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಶನಿವಾರ ಸಹ ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ತುಮಕೂರಿನ ಜಯನಗರದ 58 ವರ್ಷದ ಮಹಿಳೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಜು.16ರಂದು ಜಿಲ್ಲಾ ಆಸ್ಪತ್ರೆಯಲ್ಲಿ ಗಂಟಲು ಸ್ರಾವವನ್ನು ತೆಗೆದು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅಂದೇ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಅವರ ಮಾದರಿ ಪರೀಕ್ಷಾ ವರದಿ ಜು.17ರಂದು ಬಂದಿದ್ದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ತುಮಕೂರಿನ ಸದಾಶಿವನಗರದ 23 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇವರನ್ನು ಜು.9ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಗಂಟಲು ಸ್ರಾವ ಪರೀಕ್ಷೆಗೆ ಕಳುಹಿಸಲಾಗಿತ್ತು. ಇವರು 13ರಂದು ಮೃತಪಟ್ಟಿದ್ದರು. ಅವರ ಮಾದರಿಯಲ್ಲೂ ಸೋಂಕು ಪತ್ತೆಯಾಗಿದೆ. ತುಮಕೂರು ನಗರದಲ್ಲಿಯೇ ಕೊರೊನಾ ಸೋಂಕಿನಿಂದ 15 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT