ಮಧುಗಿರಿ: ಪಟ್ಟಣದ ಮಲ್ಲೇಶ್ವರ ಹಾಗೂ ವೆಂಕಟರಮಣ ದೇವಾಲಯ ಮುಂಭಾಗ ಶಾಶ್ವತವಾಗಿ ಬೃಹತ್ ಪೆಂಡಾಲ್ ನಿರ್ಮಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಪಟ್ಟಣದ ಮಲ್ಲೇಶ್ವರ ದೇವಾಲಯ ಮುಂಭಾಗದಲ್ಲಿ ಬಾಲಗಂಗಾಧರ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಿರುವ ವಿದ್ಯಾಗಣಪತಿಗೆ ಪೂಜೆ ಸಲ್ಲಿಸಿ ಮಾತನಾಡಿದರು.
ಮುಂದಿನ ವರ್ಷದೊಳಗೆ ಈ ಭಾಗದಲ್ಲಿ ಶಾಶ್ವತವಾದ ಪೆಂಡಾಲ್ ನಿರ್ಮಾಣಕ್ಕೆ ಅನುದಾನ ಒದಗಿಸಿ ಕಾಮಗಾರಿ ಪೂರ್ಣಗೊಳಿಸಲಾಗುವುದು. ಈಗಾಗಲೇ ಪಟ್ಟಣದ ಅಭಿವೃದ್ಧಿಗೆ ₹25 ಕೋಟಿ ಬಿಡುಗಡೆಯಾಗಿದ್ದು, ಈ ತಿಂಗಳಲ್ಲಿ ಟೆಂಡರ್ ಕರೆಯಲಾಗುವುದು ಎಂದರು.
ಕೊರಟಗೆರೆ ತಾಲ್ಲೂಕಿನ ಸಿದ್ಧರಬೆಟ್ಟದ ಬಾಳೆ ಹೊನ್ನೂರು ಶಾಖಾ ಮಠದ ಪೀಠಾಧ್ಯಕ್ಷ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪಕ್ಷಾತೀತ ಮತ್ತು ಜಾತ್ಯತೀತವಾಗಿ ಹಬ್ಬ ನಡೆಯುತ್ತಿರುವುದು ಉತ್ತಮ ನಡೆ ಎಂದು ತಿಳಿಸಿದರು.
ಮಧುಗಿರಿ ತಾಲ್ಲೂಕಿನ ತಗ್ಗಿಹಳ್ಳಿ ರಾಮಕೃಷ್ಣ ಆಶ್ರಮದ ಪೀಠಾಧ್ಯಕ್ಷ ರಮಾನಂದ ಚೈತನ್ಯ ಸ್ವಾಮೀಜಿ ಮಾತಾನಾಡಿ, ‘ಭಾರತದ ಸಂಸ್ಕೃತಿಯನ್ನು ಪಾಶ್ಚಾತ್ಯ ದೇಶಗಳಲ್ಲಿ ಅನುಸರಿಸುತ್ತಿದ್ದು, ನಮ್ಮ ದೇಶದ ಸಂಸ್ಕೃತಿಯನ್ನು ನಾವೇ ಮರೆಯುತ್ತಿದ್ದೇವೆ’ ಎಂದರು.
ಪುರಸಭೆ ಅಧ್ಯಕ್ಷ ಜಿ.ಎ.ಮಂಜುನಾಥ್, ಉಪಾಧ್ಯಕ್ಷ ಜಿ.ಆರ್., ಸುಜಾತ ಶಂಕರನಾರಾಯಣ್, ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಎನ್.ಗಂಗಣ್ಣ , ಎಂ.ವಿ.ಗೋವಿಂದರಾಜು, ಸದಸ್ಯರು ಹಾಜರಿದ್ದರು.